ಭಾರತ ಕಂಡ ಅಗ್ರಗಣ್ಯ ಶಿಕ್ಷಕ ಡಾ.ರಾಧಾಕೃಷ್ಣನ್: ಸಂತೋಷ ಬಂಡೆ
ಇಂಡಿ05: ಮಕ್ಕಳ ಬದುಕನ್ನು ರೂಪಿಸುವಲ್ಲಿ ಶಿಕ್ಷಕರು ಮಹತ್ತರವಾದ ಜವಾಬ್ದಾರಿಯನ್ನು ಹೊಂದಿದ್ದು ಸಣ್ಣ ಮಗುವಿನಿಂದ ಹಿಡಿದು ಅವರನ್ನು ಸಮಾಜದಲ್ಲಿ ಉನ್ನತ ವ್ಯಕ್ತಿಗಳನ್ನಾಗಿ ಮಾಡುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಹಿರಿದಾದುದು ಎಂದು ರಾಜ್ಯ ಪ್ರಶಸ್ತಿ ಪುರಸ್ಕೃತ ಇಂಗ್ಲೀಷ ಶಿಕ್ಷಕ ಸಂತೋಷ ಬಂಡೆ ಹೇಳಿದರು.
ಸ.05ರಂದು ತಾಲೂಕಿನ ಹಿರೇರೂಗಿ ಗ್ರಾಮದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಿದ ಡಾ.ರಾಧಾಕೃಷ್ಣನ್ ಜನ್ಮ ದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಭಾರತೀಯ ಶಿಕ್ಷಣ ಕ್ಷೇತ್ರಕ್ಕೊಂದು ಅರ್ಥವತ್ತಾದ ಚೌಕಟ್ಟನ್ನು ನೀಡುವ ಮೂಲಕ, ಶಿಕ್ಷಣ ಕ್ಷೇತ್ರ, ತತ್ವಜ್ಞಾನ, ದೇಶದ ಅಭಿವೃದ್ಧಿಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್, ಭಾರತೀಯರ ಮನದಲ್ಲಿ ಅಚ್ಚಳಿಯದ ಛಾಪೆÇತ್ತಿದ್ದಾರೆ. ಇವರು ಓರ್ವ ಶ್ರೇಷ್ಠ ಶಿಕ್ಷಣ ತಜ್ಞರಾಗಿದ್ದರು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಎ ಎಂ ಬೆದ್ರೇಕರ,ಶಿಕ್ಷಕರೆಡೆಗೆ ಅಪಾರ ಗೌರವ, ಪ್ರೀತಿ. ನಿಷ್ಠೆ ಹೊಂದಿದ್ದ, ಸ್ವತಃ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆಗೈದಿರುವ ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯ ಶಿಕ್ಷಕರಾಗಿದ್ದರು ಎಂದು ಹೇಳಿದರು.
ಎನ್ ಬಿ ಚೌಧರಿ ಸ್ವಾಗತಿಸಿದರು. ಎಸ್ ಎಸ್ ಅರಬ ನಿರೂಪಿಸಿದರು. ಎಸ್ ಬಿ ಹೆಬ್ಬಾಳ ವಂದಿಸಿದರು.