ಭಾರತ-ಅಮೆರಿಕ ನಡುವೆ ವ್ಯಾಪಾರ ಒಪ್ಪಂದ: ಮಾತುಕತೆ ಆರಂಭ
ನವದೆಹಲಿ 16: ಭಾರತ ಹಾಗೂ ಅಮೆರಿಕ ನಡುವೆ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಸಂಬಂಧ ಮಾತುಕತೆ ಇಂದು ಆರಂಭಗೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದ ಮುಖ್ಯ ಸಮಾಲೋಚಕ ಬ್ರೆಂಡನ್ ಲಿಂಚ್ ಸೋಮವಾರ ರಾತ್ರಿ ಭಾರತಕ್ಕೆ ಆಗಮಿಸಿದ್ದರು.
ಭಾರತದ ಮುಖ್ಯ ಸಮಾಲೋಚಕ ಮತ್ತು ವಾಣಿಜ್ಯ ಸಚಿವಾಲಯದ ವಿಶೇಷ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ಅವರೊಂದಿಗೆ ದಿನವಿಡೀ ಮಾತುಕತೆ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬ್ರೆಂಡನ್ ಲಿಂಚ್ ಅವರು ದಕ್ಷಿಣ ಮತ್ತು ಮಧ್ಯ ಏಷ್ಯಾದ ಅಮೆರಿಕದ ಸಹಾಯಕ ವ್ಯಾಪಾರ ಪ್ರತಿನಿಧಿಯಾಗಿದ್ದಾರೆ.
ಭಾರತದ ಮೇಲೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಧಿಕ ಸುಂಕ ಹೇರಿದ್ದರಿಂದ ಉಭಯ ರಾಷ್ಟ್ರಗಳ ನಡುವಣ ವ್ಯಾಪಾರ ಒಪ್ಪಂದ ಏರ್ಪಡುವುದರಲ್ಲಿ ಅನಿಶ್ಚಿತತೆ ಉಂಟಾಗಿತ್ತು.