ಉಕ್ರೇನ್‌ನಲ್ಲಿ ಭಾರತೀಯ ರಾಯಭಾರ ಕಚೇರಿ ಪೋಲೆಂಡ್‌ಗೆ ಸ್ಥಳಾಂತರ
ಹೊಸದಿಲ್ಲಿ: ಮಾರ್ಚ್ 13: ರಷ್ಯಾ-ಉಕ್ರೇನ್ ಯುದ್ಧದ ನಡುವೆಯೇ, ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯನ್ನು ಪೋಲೆಂಡ್‌ಗೆ ತಾತ್ಕಾಲಿಕವಾಗಿ ಸ್ಥಳಾಂತರಿಸಲು ಭಾರತ ಸರ್ಕಾರ ನಿರ್ಧರಿಸಿದೆ.
ಉಕ್ರೇನ್‌ನ ಪಶ್ಚಿಮ ಭಾಗದಲ್ಲಿ ಪರಿಸ್ಥಿತಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಇದಕ್ಕೂ ಮೊದಲು, ಮಾರ್ಚ್ 1 ರಂದು, ರಾಯಭಾರ ಕಚೇರಿಯನ್ನು ಕೈವ್‌ನಿಂದ ಲಿವ್‌ಗೆ ಸ್ಥಳಾಂತರಿಸಲಾಗಿತ್ತು. ಇಲ್ಲಿಯವರೆಗೆ ರಾಯಭಾರ ಕಚೇರಿ ಲಿವ್‌ನಿಂದಲೇ ಕಾರ್ಯನಿರ್ವಹಿಸುತ್ತಿತ್ತು.