ಭಾರತೀಯ ಸಂಸ್ಕೃತಿಗೆ ತನ್ನದೆಯಾದ ವಿಶೇಷ ಪರಿಕಲ್ಪನೆಯ ಸ್ಥಾನಮಾನಗಳಿವೆ- ರವೀಂದ್ರ
Indian culture has its own unique conceptual statuses - Ravindra
ರಾಣಿಬೆನ್ನೂರ:26 ಭಾರತೀಯ ಸಂಸ್ಕೃತಿಗೆ ತನ್ನದೆಯಾದ ವಿಶೇಷ ಪರಿಕಲ್ಪನೆಯ ಸ್ಥಾನಮಾನಗಳಿದ್ದು, ಈ ನಿಟ್ಟಿನಲ್ಲಿ ಭಾರತೀಯ ಸನಾತನ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೇಲ್ಲರ ಮೇಲಿದೆ ಎಂದು ಪ್ರಾಚಾರ್ಯ ರವೀಂದ್ರ ಕರ್ಜಗಿ ಹೇಳಿದರು.
ಬುಧವಾರ ಇಲ್ಲಿನ ರಾಜ-ರಾಜೇಶ್ವರಿ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಐ.ಕ್ಯೂ.ಎ.ಸಿ ಸಹಯೋಗದಲ್ಲಿ ನಡೆದ ಸಂಸ್ಕೃತಿ ಸಂಭ್ರಮ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಆಧುನಿಕ ಜಗತ್ತಿನಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನ ಯುಗವಾಗಿರುವ ಇಂದಿನ ಮಕ್ಕಳಿಗೆ ಭಾರತದ ಭವ್ಯ ಇತಿಹಾಸ, ಪರಂಪರೆ, ಉಡುಗೆ ತೊಡುಗೆ ಹಾಗೂ ಸಂಸ್ಕಾರ, ಸಂಸ್ಕೃತಿಗಳ ಬಗ್ಗೆ ಜಾಗೃತಿ ಮೂಡಸಬೇಕಿದೆ ಎಂದರು.
ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊಽ ನಾರಾಯಣ ನಾಯಕ ಎ. ಅಧ್ಯಕ್ಷತೆ ವಹಿಸಿದ್ದರು. ಪ್ರೊಽ ಕೃಷ್ಣ ಎಲ್. ಹೆಚ್, ಪ್ರೊಽ ರತ್ನವ್ವ ಹಾದಿಮನಿ, ಸಾವಿತ್ರಾ, ವಿದ್ಯಾ ಪ್ಯಾಟಿಮನಿ, ಪ್ರೊಽ ನಾಗರಾಜ ಗವಿಯಪ್ಪನವರ, ಪ್ರೊಽ ಶೋಭಾ ದೊಡ್ಡನಾಗಳ್ಳಿ ಸೇರಿದಂತೆ ಮತ್ತಿತರರು ಇದ್ದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 