ಧಾರವಾಡ - ಹುಬ್ಬಳ್ಳಿ

6 ಕೋಟಿ ವೆಚ್ಚದಲ್ಲಿ ಇಂದಿರಮ್ಮನ ಕೆರೆ ಅಭಿವೃದ್ಧಿ ಕಾಮಗಾರಿ: ಸಚಿವ ಲಾಡ್‌

6 ಕೋಟಿ ವೆಚ್ಚದಲ್ಲಿ ಇಂದಿರಮ್ಮನ ಕೆರೆ ಅಭಿವೃದ್ಧಿ ಕಾಮಗಾರಿ:  ಸಚಿವ ಲಾಡ್‌

ಧಾರವಾಡ ನವೆಂಬರ 22: ಅಳ್ನಾವರ ತಾಲೂಕಿನ ಇಂದಿರಮ್ಮನ ಕೆರೆಯ ಅಭಿವೃದ್ಧಿ ಕಾಮಗಾರಿಯನ್ನು ಸುಮಾರು 6 ಕೋಟಿ ವೆಚ್ಚದಲ್ಲಿ ಇಂದಿರಮ್ಮನ ಕೆರೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.  

ಇಂದು ಬೆಳಿಗ್ಗೆ ಅವರು ಅಳ್ನಾವರ ತಾಲೂಕಿನ ಇಂದಿರಮ್ಮನ ಕೆರೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿ, ಮಾತನಾಡಿದರು.  

ಕಾಮಗಾರಿಯ ಸಂದರ್ಭದಲ್ಲಿ ಗುತ್ತಿಗೆದಾರರು ಹಾಗೂ ಸಾರ್ವಜನಿಕರು ಸಹಕರಿಸಬೇಕು. ಕೆರೆಯ ಕಾಮಗಾರಿಯನ್ನು 9 ತಿಂಗಳ ಅವಧಿಯೊಳಗೆ ಮುಗಿಸಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆಯನ್ನು ನೀಡಿದರು. 

ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಬೋಸರಾಜು ಅವರು ಅಧಿಕಾರಿಗಳ ಜೋತೆ ಬಂದು ಕೆರೆಯ ಸುತ್ತ ಮುತ್ತಲಿನ ಪ್ರದೇಶವನ್ನು ಪರೀಶೀಲಿಸಿದರು. ನಾವೆಲ್ಲರೂ ಒಂದೇ ಇದು ಸರ್ಕಾರದ ಕೆಲಸವನ್ನು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡೋಣ. ಇದಕ್ಕೆ ಎಲ್ಲರ ಸಹಭಾಗಿತ್ವ ಅವಶ್ಯಕ. ಸುಮಾರು 2 ಸಾವಿರ ಹೆಕ್ಟೇರ್ ಅಂದರೆ 5 ಸಾವಿರ ಎಕರೆಗೆ ಕೆರೆಯ ನೀರು ಉಪಯೋಗವಾಗಲಿದೆ. ರೈತರಿಗೆ ಬರಗಾಲದ ಸಂದರ್ಭದಲ್ಲಿ ಬೆಳೆ ಬೆಳೆಯಲು ಕೆರೆ ನೀರು ಉಪಯೋಗಿಸಲು ಸಹಾಯಕವಾಗಲಿದೆ. ಮುಂದಿನ ದಿನಗಳಲ್ಲಿ ರೈತರಿಗೆ ನೀರು ಸರಬರಾಜು ಆಗುತ್ತದೆ ಎಂದು ಅವರು ಹೇಳಿದರು.  

ಕಾರ್ಯಕ್ರಮದಲ್ಲಿ ಅಳ್ನಾವರ ತಾಲೂಕಿನ ತಹಶೀಲ್ದಾರ ಬಸವರಾಜ ಬೆಣ್ಣಿಶಿರೋರ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಹುಲಿಕೇರಿ ಗ್ರಾಮಸ್ಥರು ಭಾಗವಹಿಸಿದ್ದರು.   

ಸುದ್ದಿ ಓದಿ