ಇಂಡೋನೇಷಿಯಾ: ಜೈಲಿನ ಅಗ್ನಿ ದುರಂತದಲ್ಲಿ 40 ಮಂದಿ ಸಾವು
ಮಾಸ್ಕೋ, ಸೆ.08: ಇಂಡೋನೇಷ್ಯಾದ ಬಾಂಟೆನ್ ಪ್ರಾಂತ್ಯದ ಸೆರೆಮನೆಯಲ್ಲಿ ಅಗ್ನಿದುರಂತ ಸಂಭವಿಸಿದ್ದು, 40 ಮಂದಿ ಮೃತಪಟ್ಟಿದ್ದಾರೆ.
ಬುಧವಾರ ಮುಂಜಾನೆ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯ ನಂತರ ಜೈಲಿನ ಕಟ್ಟಡದಿಂದ ಜನರನ್ನು ಸ್ಥಳಾಂತರಿಸಲಾಗುತ್ತಿದೆ.
ಇದ್ದಕ್ಕಿದ್ದಂತೆ ಸಂಭಿಸಿರುವ ಅಗ್ನಿ ದುರಂತದ ಕಾರಣವನ್ನು ತನಿಖೆ ಮಾಡಲಾಗುತ್ತಿದೆ.