ಹೊಸಪೇಟೆ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳಿಗಾಗಿ ಒಳಾಂಗಣ ಕ್ರೀಡಾಕೂಟ ಆಯೋಜನೆಜಿಲ್ಲಾ ಕಾರಾಗೃಹ ಬಂದಿಗಳಿಗೆ ಒಳಾಂಗಣ ಕ್ರೀಡಾಕೂಟ
ವಿಜಯನಗರ (ಹೊಸಪೇಟೆ) ಅ.13: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ದಸರಾ ಹಬ್ಬದ ಪ್ರಯುಕ್ತ ಹೊಸಪೇಟೆಯ ಜಿಲ್ಲಾ ಕಾರಾಗೃಹದಲ್ಲಿ ಬಂದಿಗಳ ಮನರಂಜನೆಗಾಗಿ ಇಂದು ಒಳಾಂಗಣ ಕ್ರೀಡಾಕೂಟ ಆಯೋಜಿಸಲಾಯಿತು.
ಕಾರಾಗೃಹ ಸುಧಾರಣಾ ಸೇವಾ ಇಲಾಖೆಯ ಮಹಾನಿರ್ದೇಶಕ ಅಲೋಕ್ ಕುಮಾರ್ ಹಾಗೂ ಜಿಲ್ಲಾ ಕಾರಾಗೃಹ ಅಧೀಕ್ಷಕ ಎಫ್.ಜಿ. ಬಾರಿಕೇರ್ ಅವರ ನಿರ್ದೇಶನದಂತೆ ನಡೆದ ಕ್ರೀಡಾಕೂಟದಲ್ಲಿ ಚೆಸ್, ಕೇರಂ ಹಾಗೂ ಮ್ಯೂಸಿಕಲ್ ಚೇರ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.
ಶಿಕ್ಷಕರ ಸಂಘದ ಉಪಾಧ್ಯಕ್ಷೆ ವಿಜಯಕುಮಾರಿ ಸೇರಿದಂತೆ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರ ಮಾರ್ಗದರ್ಶನದಲ್ಲಿ ಸ್ಪರ್ಧೆಗಳು ಯಶಸ್ವಿಯಾಗಿ ನಡೆದವು. ಕ್ರೀಡಾಕೂಟದಲ್ಲಿ ವಿಜೇತರಾದ ಬಂದಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸಹಾಯಕ ಜೈಲರ್ ಎಸ್.ಎಸ್.ಲಚ್ಯಾಣ, ಕೆ.ರಿಯಾಜ್, ಸೈನಿಕ ಭೀಮೇಶ್ ಸೇರಿದಂತೆ ಕಾರಾಗೃಹದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.