ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕರಿಸಲಿ ಸಹಕಾರ ನೀಡದಿದ್ದರೆ ಕ್ರಮ: ಸಚಿವ ರುದ್ರ್ಪ ಲಮಾಣಿ
ಲೋಕದರ್ಶನ ವರದಿ
ಹಾವೇರಿ, ಸೆ.9 ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಡ ಮಕ್ಕಳ ಶಿಕ್ಷಣಕ್ಕೆ ಕೈಗಾರಿಕೆಗಳು ತಮ್ಮ ಸಿಎಸ್‌ಆರ್ (ಕಾರ್ೊರೇಟ್ ಸಾಮಾಜಿಕ ಹೊಣೆಗಾರಿಕೆ) ನಿಧಿಯನ್ನು ಸಮರ್ಕವಾಗಿ ಬಳಸಬೇಕು. ಸರ್ಕಾರದ ಯೋಜನೆಗಳಿಗೆ ಅಗತ್ಯ ಸಹಕಾರ ನೀಡದಿದ್ದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಕ್ಕರೆ ಮತ್ತು ಜವಳಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರುದ್ರ್ಪ ಲಮಾಣಿ ಎಚ್ಚರಿಕೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಿಎಸ್‌ಆರ್ ನಿಧಿ ಬಳಕೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಆಧುನಿಕ ಮೂಲಸೌಕರ್ಯ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಸಮುದಾಯ ಮತ್ತು ಕೈಗಾರಿಕೆಗಳ ಸಹಭಾಗಿತ್ವ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಿಎಸ್‌ಆರ್ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಕ್ರಮ ಕೈಗೊಳ್ಳಲಾಗಿದೆ ಎಂದರು.
ಜಿಲ್ಲೆಯಲ್ಲಿರುವ ಕೈಗಾರಿಕೆಗಳು ಸ್ಥಳೀಯ ಜನರು ಹಾಗೂ ಸರ್ಕಾರದ ಯೋಜನೆಗಳಿಗೆ ಸಹಕಾರ ನೀಡುವುದು ಅವರ ಜವಾಬ್ದಾರಿಯಾಗಿದೆ. ಸರ್ಕಾರಿ ಶಾಲೆಗಳ ಕಟ್ಟಡ, ಮೂಲಸೌಕರ್ಯ ಸೇರಿದಂತೆ ಅಗತ್ಯ ಸೌಲಭ್ಯಗಳ ಅಭಿವೃದ್ಧಿಗೆ ಕೈಗಾರಿಕೆಗಳು ಮುಂದಾಗಬೇಕು ಎಂದು ಸಚಿವರು ಸೂಚಿಸಿದರು.
184 ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭ
2026-27ನೇ ಸಾಲಿನಲ್ಲಿ ಜಿಲ್ಲೆಯ 184 ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಆರಂಭಿಸಲಾಗಿದ್ದು, ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಸರ್ಕಾರಿ ಕನ್ನಡ ಶಾಲೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ ಹಂತ ಹಂತದ ಯೋಜನೆ
ಜಿಲ್ಲೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ಗಳ (ಕೆಪಿಎಸ್) ಅಭಿವೃದ್ಧಿಗೆ ಹಂತ ಹಂತವಾಗಿ ಯೋಜನೆ ರೂಪಿಸಲಾಗಿದೆ. 2026-27ನೇ ಸಾಲಿನಲ್ಲಿ ಶಾಲೆಗಳ ಆಯ್ಕೆ, ಭೂಮಿ ಗುರುತಿಸುವಿಕೆ ಹಾಗೂ ಅಗತ್ಯ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಮುಂದಿನ ಹಂತದಲ್ಲಿ ಶಾಲೆಗಳ ನಿರ್ಮಾಣ ಹಾಗೂ ಇತರೆ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ ಕೈಗಾರಿಕೆಗಳ ಸಿಎಸ್‌ಆರ್ ನಿಧಿ ಬಳಸಿಕೊಳ್ಳಲು ಸರ್ಕಾರ ಮುಂದಾಗಿದೆ. ಕೈಗಾರಿಕೆಗಳು ತಮ್ಮ ಸಾಮಾಜಿಕ ಹೊಣೆಗಾರಿಕೆಯನ್ನು ಸಮರ್ಕವಾಗಿ ನಿರ್ವಹಿಸಿ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ನೀಡಿರುವ ಭರವಸೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ರುದ್ರ್ಪ ಲಮಾಣಿ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದೀಲೀಪ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧ ವಂಟಗೋಡಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮೋಹನ್ ದಂಡಿನ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕೈಗಾರಿಕೋದ್ಯಮಿಗಳು, ಕಾರ್ೊರೇಟ್ ಸಂಸ್ಥೆಗಳ ಪ್ರತಿನಿಧಿಗಳು, ಸಿಎಸ್‌ಆರ್ ಪಾಲುದಾರರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.