ದಕ್ಷಿಣ ಕನ್ನಡ ಜಿಲ್ಲೆಯ ಮೂವರಿಗೆ ಸೋಂಕು
ಮಂಗಳೂರು, ಮೇ 9, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮೂರು ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 25ಕ್ಕೇರಿದೆ.ಫಸ್ಟ್ ನ್ಯೂರೋ ಆಸ್ಪತ್ರೆಯ ಸಂಪರ್ಕ ಹೊಂದಿದ್ದ ಒಂದೇ ಕುಟುಂಬದ ಇಬ್ಬರು ಮಹಿಳೆಯರು ಮತ್ತು ಓರ್ವ ಪುರುಷನಿಗೆ ಸೋಂಕು ದೃಢಪಟ್ಟಿದೆ.ಮೇ 1ರಂದು ಕೊರೋನಾ ಪತ್ತೆಯಾಗಿದ್ದ 64 ವರ್ಷದ ಸೋಂಕಿತ 578 ವೃದ್ಧನಿಂದ ಇವರಿಗೆ ಸೋಂಕು ಬಂದಿದೆ ಎನ್ನಲಾಗಿದೆ.
ಬಂಟ್ವಾಳ ಕಸಬಾ ಹೋಬಳಿಯ ಮೃತ ಮಹಿಳೆಯ ಸಂಬಂಧಿಕರು ಮತ್ತು ನೆರೆಮನೆಯವರಾಗಿರುವ ವೃದ್ಧನಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರ ಮನೆಯ 8 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿತ್ತು. ಸದ್ಯ ಅವರಲ್ಲಿ ಮೂವರಿಗೆ ಪಾಸಿಟಿವ್ ಇರುವುದು ಪತ್ತೆಯಾಗಿದೆ.ಫಸ್ಟ್ ನ್ಯೂರೋ ಸಂಪರ್ಕದಿಂದ ಇದುವರೆಗೆ 17 ಮಂದಿಗೆ ಸೋಂಕು ತಗುಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 25 ಮಂದಿಗೆ ಸೋಂಕು ತಗುಲಿದೆ. ಜಿಲ್ಲೆಯಲ್ಲಿ ಇದುವರೆಗೆ ಮೂವರು ಮೃತಪಟ್ಟಿದ್ದು, 13 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 