ಕಾರವಾರ

ವಿಬಿ-ಜಿ ರಾಮ್‌-ಜಿ ಕಾಮಗಾರಿ ಸ್ಥಳದಲ್ಲಿ ಮಾಹಿತಿ ವಿನಿಮಯ ಕಾರ್ಯಕ್ರಮ

ವಿಬಿ-ಜಿ ರಾಮ್‌-ಜಿ ಕಾಮಗಾರಿ ಸ್ಥಳದಲ್ಲಿ ಮಾಹಿತಿ ವಿನಿಮಯ ಕಾರ್ಯಕ್ರಮ

ಲೋಕದರ್ಶನ ವರದಿ 

ಕಾರವಾರ 05 :- ಮುಂಡಗೋಡ ತಾಲೂಕಿನ ಕೋಡಂಬಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಅಜೀವಿಕ ಮಿಷನ್  ಯೋಜನೆಯಡಿ ಜಾರಿಯಲ್ಲಿರುವ ಟ್ರೆಂಚ್ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಕೂಲಿಕಾರರಿಗೆ ಮಾಹಿತಿ ವಿನಿಮಯ ಕಾರ್ಯಕ್ರಮ ಸೋಮವಾರ ಜರುಗಿತು.  

ಜಿಲ್ಲಾ ಐಇಸಿ ಸಂಯೋಜಕ ಕಿರಣ ಜೋತೆಪ್ಪನವರ ಮಾತನಾಡಿ, ಗ್ರಾಮೀಣ ಪ್ರದೇಶದ ಅಕುಶಲ ಕೂಲಿಕಾರರಿಗೆ ಸ್ಥಳೀಯವಾಗಿಯೇ ಉದ್ಯೋಗ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ವಿಬಿ-ಜಿ ರಾಮ್‌-ಜಿ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಗ್ರಾಮೀಣ ರೋಜಗಾರ್ ಗ್ಯಾರಂಟಿ ಕಾರ್ಡ್‌ ಹೊಂದಿರುವ ಅರ್ಹ ಕುಟುಂಬಕ್ಕೆ ದಿನಕ್ಕೆ 382 ರೂ. ಕೂಲಿಯಂತೆ ವಾರ್ಷಿಕ 125 ಮಾನವ ದಿನ ನೀಡಲಾಗುತ್ತಿದೆ.

ಹಿರಿಯ ನಾಗರಿಕರು, ವಿಶೇಷ ಚೇತನರು ಮತ್ತು ಗರ್ಭಿಣಿ ಮಹಿಳೆಯರಿಗೆ ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ಇದ್ದು, ಪುರುಷ ಹಾಗೂ ಮಹಿಳೆಯರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲಾಗುತ್ತಿದೆ ಎಂದರು.  


ಸುದ್ದಿ ಓದಿ