ಕೊಪ್ಪಳ 02: ಕೊಪ್ಪಳ ಇನ್ನರ್ ವೀಲ್ ಕ್ಲಬ್ ಮೊದಲನೇ ಮಹಡಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಕಾರ್ಮಿಕರಿಗೆ ಕಾರ್ಮಿಕ ದಿನಾಚರಣೆಯ ಪ್ರಯುಕ್ತ ಕ್ಲಬ್ ವತಿಯಿಂದ ಎಲ್ಲಾ ಕಾರ್ಮಿಕರಿಗೆ ಬಟ್ಟೆಗಳನ್ನು ವಿತರಿಸುವುದರ ಮೂಲಕ ಅವರನ್ನು ಕಾರ್ಮಿಕ ದಿನಾಚರಣೆಯ ಶುಭಾಶಯ ಕೋರಿದರು.
ಕೊಪ್ಪಳ ಇನ್ನರ್ ವೀಲ್ ಕ್ಲಬ್ ಪರವಾಗಿ ವಿಧಾನ ಪರಿಷತ್ತಿನ ಸದಸ್ಯರಾದ ಶಾಸಕಿ ಹೇಮಲತಾ ನಾಯಕರವರು ಕಾರ್ಮಿಕರಿಗೆ ಸಮವಸ್ತ್ರ ಬಟ್ಟೆಗಳನ್ನು ವಿತರಿಸಿ ಶುಭ ಕೋರಿದರು,
ಈ ಸಂದರ್ಭದಲ್ಲಿ ಕೊಪ್ಪಳ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾದ ಉಮಾ ಮಹೇಶ್ ತಂಬ್ರಳ್ಳಿ ಕಾರ್ಯಕಾರಣಿ ಸಮಿತಿ ಹಿರಿಯ ಸದಸ್ಯರಾದ ಡಾ,ರಾಧಾ ಕುಲಕರ್ಣಿ ವಾಣಿಜ್ಯ ಉದ್ಯಮಿ ಹಾಗೂ ಸಮಾಜ ಸೇವಕರಾದ ಮಹೇಶ್ ತಂಬ್ರಳ್ಳಿ ಸೇರಿದಂತೆ ಕ್ಲಬ್ಬಿನ ಪದಾಧಿಕಾರಿಗಳು ಸದಸ್ಯರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಅಲ್ಲದೆ ಕಟ್ಟಡ ಕಾಮಗಾರಿ ನಿರ್ವಹಿಸಿದ ಕಾರ್ಮಿಕ ವರ್ಗದವರು ಪಾಲ್ಗೊಂಡಿದ್ದರು.