ಸಂಪೂರ್ಣ ಲಾಕ್ಡೌನ್ ಮಾಡಲು ಮೀನಳ್ಳಿ ತಾಯಣ್ಣ ಒತ್ತಾಯ
ಬಳ್ಳಾರಿ 06: ಕೋವಿಡ್-19 ಸೊಂಕು ಹರಡುವಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೂಡಲೇ ನಿಯಂತ್ರಣಕ್ಕೆ ಸಕರ್ಾರ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲು ಮುಂದಾಗಬೇಕು, ಪರಿಸ್ಥಿತಿ ಇದೇ ರೀತಿ ಮುಂದುವರೆದರೇ ಸೋಂಕಿತರ ಸಂಖ್ಯೆ ಇನ್ನೂ ದುಪ್ಪಟ್ಟಾಗಲಿದೆ ಎಂದು ಜೆಡಿಎಸ್ ಕಲ್ಯಾಣ ಕನರ್ಾಟಕ ವೀಕ್ಷಕ ಡಿ.ಮೀನಳ್ಳಿ ತಾಯಣ್ಣ ಅವರು ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಸೇರಿದಂತೆ ಸಂಬಂಧಿಸಿದ ನಾನಾ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಕೊರೋನಾ ಸೊಂಕು ತಡೆಗಟ್ಟಲು ಬಿಡುವಿಲ್ಲದೇ ಶ್ರಮಿಸುತ್ತಿದ್ದು, ಆದರೂ, ನಿಯಂತ್ರಣಕ್ಕೆ ಬರುತ್ತಿಲ್ಲ, ಔಷಧಿ ಅಂಗಡಿಗಳು ಸೇರಿ ಅಗತ್ಯ ವಸ್ತುಗಳಿಗೆ ಮಾತ್ರ ಸಕರ್ಾರ ಅಂಗಡಿ ತೆರೆಯಲು ಅನುಮತಿ ನೀಡಿದೆ. ಆದರೇ, ನಗರ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಎಲ್ಲವೂ ಎಂದಿನಂತೆ ಇರುವುದು ಹೆಚ್ಚು ಕಂಡು ಬರುತ್ತಿದೆ. ಪರಿಸ್ಥಿತಿ ಇದೇ ರೀತಿ ಮುಂದುವರೆದರೇ ಸೊಂಕಿನ ಮಟ್ಟ ಹಾಕಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ಸಕರ್ಾರ ಕೂಡಲೇ ಈ ಕುರಿತು ಗಮನಹರಿಸಿ ಸುಮಾರು 10-15 ದಿನಗಳವರೆಗೆ ಸಂಪೂರ್ಣ ಲಾಕ್ ಡೌನ್ ಜಾರಿಮಾಡಲು ಮುಂದಾಗಬೇಕು, ಅಂದಾಗ ಮಾತ್ರ ಕೊರೋನಾ ಹೆಮ್ಮಾರಿಯನ್ನು ನಿಯಂತ್ರಿಸಲು ಸಾಧ್ಯ ಎಂದು ಒತ್ತಾಯಿಸಿದ್ದಾರೆ.
ನಗರದ ವಿಮ್ಸ್ ಆಸ್ಪತ್ರೆ ರೋಗಿಗಳ ಸಾವಿನ ಮನೆಯಾದಂತಾಗಿದೆ. ಸೊಂಕಿತರು ಚಿಕಿತ್ಸೆಗೆ ತೆರಳಿದರೇ ಬೆಡ್ ಖಾಲಿ ಇಲ್ಲ, ಆಕ್ಸಿಜನ್ ಇದ್ದರೂ ಇಲ್ಲ ಎನ್ನುವ ಉತ್ತರ ಸಾಮಾನ್ಯವಾಗಿದೆ. ಇದರಿಂದ ಬಡ ರೋಗಿಗಳು ನಿತ್ಯ ನರಕಯಾತನೆ ಅನುಭವಿಸುಂತಾಗಿದೆ. ಕೂಡಲೇ ಇದಕ್ಕೆ ಕಡಿವಾಣ ಹಾಕಲು ಜಿಲ್ಲಾಡಳಿತ ಮುಂದಾಗಬೇಕು. ಬೆಂಗಳೂರು ಮಾದರಿಯಲ್ಲಿ ಖಾಸಗಿ ಆಸ್ಪತ್ರೆಗಳನ್ನು ವಶಕ್ಕೆ ಪಡೆದು ಕಡಿಮೆ ದರದಲ್ಲಿ ಸೊಂಕಿತರಿಗೆ ಚಿಕಿತ್ಸೆ ಕಲ್ಪಿಸಲು ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಜಿಂದಾಲ್ ಉಕ್ಕು ಕಾಖರ್ಾನೆಗೆ ಜಮೀನು ಪರಭಾರೆ ಕ್ರಮ ಖಂಡಿಸಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಈ ಹಿಂದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸಕರ್ಾರ ಉರುಳಿಸಲು ಕಾರಣರಾಗಿದ್ದರು. ಆದರೇ, ರಾಜ್ಯ ಸಕರ್ಾರ ಇತ್ತೀಚೆಗೆ ಜಮೀನು ಪರಭಾರೆ ಮಾಡಲು ಸಂಪುಟ ಸಭೆಯಲ್ಲಿ ಅನುಮತಿ ನೀಡಿದೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರ ಗಮನಕ್ಕಿದ್ದರೂ ಈ ಕುರಿತು ತುಟಿ ಬಿಚ್ಚುತ್ತಿಲ್ಲ, ನಿಜವಾಗಲು ಜಿಲ್ಲೆಯ ಜನರ ಬಗ್ಗೆ ಕಾಳಜಿ ಇದ್ದರೇ, ದೇಶಕ್ಕೆ ಅನ್ನ ನೀಡುವ ರೈತರ ಬಗ್ಗೆ ಕಾಳಜಿ ಇದ್ದರೇ ಕೂಡಲೇ ಜಿಂದಾಲ್ಗೆ ಜಮೀನು ಪರಭಾರೆ ಮಾಡಿರುವ ಕ್ರಮ ಖಂಡಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರ ಬನ್ನಿ ಎಂದು ಸವಾಲು ಹಾಕಿದ್ದಾರೆ. ನಿರ್ಲಕ್ಷಿಸಿದರೇ ಬರುವ ದಿನಗಳಲ್ಲಿ ಜೆಡಿಎಸ್ ಜಿಲ್ಲಾ ಘಟಕದ ಆಶ್ರಯದಲ್ಲಿ ಉಗ್ರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ