ಜಾತ್ರೆಗಳಲ್ಲಿ ಮುಸ್ಲಿಂರಿಗೆ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲು ಒತ್ತಾಯ
ಲೋಕದರ್ಶನ ವರದಿ
ಕುಷ್ಟಗಿ 05: ಹಿಂದುಗಳ ಹಬ್ಬ ಹಾಗೂ ಜಾತ್ರೆಗಳಲ್ಲಿ ಮುಸ್ಲಿಂ ಸಮುದಾಯದವರ ವ್ಯಾಪಾರ ವಹಿವಾಟು ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಸಿಪಿಎಂ ಕಾರ್ಯದರ್ಶಿ ಆರ್.ಕೆ ದೇಸಾಯಿ ಸರಕಾರಕ್ಕೆ ಒತ್ತಾಯ ಮಾಡಿದರು.
ಅಲ್ಪಸಂಖ್ಯಾತರ ಮುಸ್ಲಿಂ ಸಮುದಾಯದವರ ವ್ಯಾಪಾರವನ್ನು ನಿರ್ಬಂಧಿಸಿರುವ ಸರಕಾರದ ನಡೆಯನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸವಾದಿ) ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಮಂಗಳವಾರ ಮಧ್ಯಾಹ್ನ ಇಲ್ಲಿನ ತಹಸಿಲ್ದಾರ್ ಕಚೇರಿಯಲ್ಲಿ ತಹಸೀಲ್ದಾರ್ಗೆ ಮನವಿ ಸಲ್ಲಿಸಿ ಮಾತನಾಡಿದ ಅವರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಯಾವುದೇ ರೀತಿಯ ತಾರತಮ್ಯಗೊಳಿಸದೆ ಬಡ ಮುಸ್ಲಿಂ ಸಮುದಾಯವರಿಗೆ ವ್ಯಾಪಾರ ವಹಿವಾಟು ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಸರಕಾರಕ್ಕೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರು ರಾಜ್ಯ ರೈತ ಸಂಘ ಹಸಿರು ಸೇನೆ ನಜೀರ್ ಸಾಬ್ ಮೂಲಿಮನಿ, ಪುರಸಭೆ ಸದಸ್ಯ ವಸಂತ ಮೇಲಿನಮನಿ, ಸಿಐಟಿಯು ಅಧ್ಯಕ್ಷ ಕಲಾವತಿ ಮಣೇದಾಳ, ಚಂದಾಲಿಂಗಪ್ಪ ಕಲಾಲಬಂಡಿ, ಪಂಪಣ್ಣ ತಳವಗೇರಿ, ಸಂಗಪ್ಪ ಗುಳಗೌಡರ, ಗವಿಸಿದ್ಧಪ್ಪ ಗಡಾದ, ಮಲ್ಲಿಕಾರ್ಜುನ ಗೌಡ, ಬಸಮ್ಮ ಮೇಣೆದಾಳ, ರಮಜಾನಸಾಬ, ಯಮನೂರ್ಪ ಗಡಾದ ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಸಿಪಿಐ (ಎಂ) ಕಚೇರಿಯಿಂದ ಪ್ರತಿಭಟನೆಯ ಮೂಲಕ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಬಸವೇಶ್ವರ ವೃತ್ತದ ಮಾರ್ಗವಾಗಿ ತಹಸೀಲ್ದಾರ್ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು.