ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ಪರಿಹಾರ ದೊರಕಿಸಿಕೊಡಲು ಒತ್ತಾಯ
Insisting that the state government should provide administrative relief
ಮೂಡಲಗಿ 15 : ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಹಾಗೂ ಬೇಡಿಕೆಗಳು ಸಮಂಜಸವಾಗಿದ್ದು, ರಾಜ್ಯ ಸರ್ಕಾರ ಆಡಳಿತಾತ್ಮಕವಾಗಿ ಪರಿಹಾರ ದೊರಕಿಸಿಕೊಡಬೇಕೆಂದು ಅಖಿಲ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಗುಂಡಪ್ಪ ಕಮತೆ ಒತ್ತಾಯಿಸಿದರು.
ಶುಕ್ರವಾರದಂದು ಪಟ್ಟಣದ ತಹಶೀಲ್ದಾರ ಕಾರ್ಯಾಲಯ ಆವರಣದಲ್ಲಿ ನಡೆಯುತ್ತಿರುವ ಮೂಡಲಗಿ ತಾಲೂಕಿನ ಗ್ರಾಮ ಅಧಿಕಾರಿಗಳ 2ನೇ ಹಂತದ ಅನಿರ್ಧಾಷ್ಟವಧಿ ಮುಷ್ಕರದಲ್ಲಿ ಭಾಗವಹಿಸಿ, ಸಮಸ್ತ ಕಬ್ಬು ಬೆಳೆಗಾರರ ಹಾಗೂ ಸಂಘದ ಪರವಾಗಿ ಬೆಂಬಲ ಸೂಚಿಸುತ್ತ ಮಾತನಾಡಿದ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳನ್ನು ಆಡಳಿತಾತ್ಮಕವಾಗಿ ಪರಿಹರಿಸುವುದರಿಂದ ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆ ಆಗುವುದಿಲ್ಲ, ಸಮಂಜಸವಾದ ಬೇಡಿಕೆಗಳನ್ನು ಈ ಕೂಡಲೇ ಈಡೇರಿಸಿ ಗ್ರಾಮಗಳಲ್ಲಿನ ರೈತರಿಗೆ, ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಸರಕಾರ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ಶಿವಾನಂದ ಪಾಟೀಲ್, ಅಜೀತ್ ಬೆಣವಾಡ, ಬಾಹುಬಲಿ ಬೋಳಿ, ಮಾಣಿಕ್ ಬೋಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 