ನಂತಶಯನಗುಡಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪರೀಶೀಲನೆ: ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ನಂತಶಯನಗುಡಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪರೀಶೀಲನೆ: ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ  Inspection of Ananthashayanagudi railway overbridge work: Deputy Commissioner directs completion wit

ವಿಜಯನಗರ (ಹೊಸಪೇಟೆ), ಜು.30: ನಗರದ ಅನಂತಶಯನಗುಡಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರೀಶೀಲಿಸಿದರು.  ಕಾಮಗಾರಿಯ ಪ್ರಗತಿ, ಕಾಂಕ್ರೀಟ್, ಸೆಂಟರಿಂಗ್ ಹಾಗೂ ವಾಹನ ಮತ್ತು ಪಾದಚಾರಿಗಳ ಸಂಚಾರಕ್ಕೆ ಸಂಬಂಧಿಸಿದ ವ್ಯವಸ್ಥೆಗಳನ್ನು ವೀಕ್ಷಿಸಿದ ಜಿಲ್ಲಾಧಿಕಾರಿಗಳು, ಈ ಮಾರ್ಗದಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳು ಹಾಗೂ ಸಾರ್ವಜನಿಕರು ಸಂಚರಿಸುವ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಳದಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.  

ಉಳಿದಿರುವ ಕಾಮಗಾರಿಗಳನ್ನು ಯಾವುದೇ ವಿಳಂಬವಿಲ್ಲದೆ ವೇಗವಾಗಿ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಆಗುತ್ತಿರುವ ಸಂಚಾರದ ತೊಂದರೆಯನ್ನು ಶೀಘ್ರ ನಿವಾರಿಸಬೇಕು ಎಂದು ಸಂಬಂಧಿಸಿದ ಎಂಜಿನಿಯರ್ಗಳು ಹಾಗೂ ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು.  ನಿರ್ಮಾಣ ಕಾರ್ಯದಲ್ಲಿ ಗುಣಮಟ್ಟಕ್ಕೆ ಯಾವುದೇ ರೀತಿಯ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಪ್ರತಿಯೊಂದು ಹಂತದಲ್ಲೂ ಕಾಂಕ್ರೀಟ್ನ ಗುಣಮಟ್ಟ ಮತ್ತು ಸಾಮರ್ಥ್ಯವನ್ನು ಪರೀಕ್ಷಿಸಿ, ನಿಗದಿತ ಅವಧಿಯೊಳಗೆ ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸುವಂತೆ ಸೂಚಿಸಿದರು.  ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್, ಪ್ರಾದೇಶಿಕ ಸಾರಿಗೆ ಅಧಿಕಾರಿ ದಾಮೋದರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ್, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಹಾಗೂ ಸಂಬಂಧಿತ ಎಂಜಿನಿಯರ್ಗಳು ಉಪಸ್ಥಿತರಿದ್ದರು.