ಜಿ.ಪಂ ಸಿಇಒ ರವರಿಂದ ಜೆಜೆಎಮ್ ಕಾಮಗಾರಿ ಪರೀಶೀಲನೆ
Inspection of JJM work by G. Pm CEO
ಜಿ.ಪಂ ಸಿಇಒ ರವರಿಂದ ಜೆಜೆಎಮ್ ಕಾಮಗಾರಿ ಪರೀಶೀಲನೆ
ಕಾರವಾರ, ಜು.31:- ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ಅನುಷ್ಠಾನಗೊಳಿಸಲಾದ ಜೆಜೆಎಮ್ ಕಾಮಗಾರಿ ಸ್ಥಳಗಳಿಗೆ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ದೀಲೀಷ್ ಶಶಿ ಅವರು ಗುರುವಾರ ಭೇಟಿ ನೀಡಿ ಪರೀಶೀಲನೆ ನಡೆಸಿದರು.
ತಾಲೂಕಿನ ಉಂಚಳ್ಳಿ ಗ್ರಾಮ ಪಂಚಾಯತ್ ನ ಕಲ್ಲಿ, ಗುಡ್ನಾಪುರ ಗ್ರಾಮ ಪಂಚಾಯತ್ ನ ನವಣಗೇರಿ, ಭಾಶಿ ಗ್ರಾಮ ಪಂಚಾಯತ್ ನ ಯಡೂರಬೈಲ್ ಗ್ರಾಮದಲ್ಲಿ ಅನುಷ್ಠಾನಗೊಂಡ ಜಲಜೀವನ್ ಮಿಷನ್ ಯೋಜನೆಯ ಸದುಪಯೋಗ ಪಡೆದ ಮನೆಗಳಿಗೆ ಭೇಟಿ ನೀಡಿ ನೀರಿನ ಸದ್ಭಳಕೆ ಕುರಿತು ಫಲಾನುಭವಿಗಳಿಂದ ಖುದ್ದಾಗಿ ಮಾಹಿತಿ ಪಡೆದು ನೀರಿನ ಗುಣಮಟ್ಟ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬನವಾಸಿ ಹಾಗೂ ಬದನಗೋಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಕಾಮಗಾರಿ ಸ್ಥಳವನ್ನು ಪರೀಶೀಲಿಸಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೀರಿನ ಕೊರತೆ ಬಾರದಂತೆ ಕ್ರಮ ವಹಿಸಲು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.ಈ ಸಮಯದಲ್ಲಿ ಬನವಾಸಿ ಗ್ರಾಮ ಪಂಚಾಯತ್ ನಂಬರ್ 3 ಅಂಗನವಾಡಿಗೆ ಭೇಟಿ ನೀಡಿ ಮಕ್ಕಳ ಯೋಗಕ್ಷೇಮ ವಿಚಾರಿಸಿ, ಹಾಜರಾತಿ, ಆಹಾರ, ಆಟಿಕೆ, ಮೂಲಭೂತ ಸೌಲಭ್ಯಗಳು ಹಾಗೂ ಆಹಾರ ಪದಾರ್ಥಗಳನ್ನು ಪರೀಶೀಲಿಸಿ ಮಕ್ಕಳ ಸುರಕ್ಷತೆ ಕುರಿತು ಜಾಗ್ರತೆ ವಹಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಚನ್ನಬಸಪ್ಪ ಹಾವಣಗಿ, ಜೆಜೆ ಎಮ್ ಯೋಜನೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಹಾಗೂ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 