ವಿಜಯಪುರ

ಬ್ಯಾಕೋಡ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು- ಗ್ರಾಮೀಣ ಉದ್ಯೋಗ ಹಾಗೂ ಮೂಲಸೌಕರ್ಯಗಳ ಪರೀಶೀಲನೆ

ಬ್ಯಾಕೋಡ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು- ಗ್ರಾಮೀಣ ಉದ್ಯೋಗ ಹಾಗೂ ಮೂಲಸೌಕರ್ಯಗಳ ಪರೀಶೀಲನೆ
Inspection of drinking water, rural employment, and infrastructure within the jurisdiction of Byako


          ವಿಜಯಪುರ 28 : ಕುಡಿಯುವ ನೀರಿನ ಸಮಸ್ಯೆಗೆ ತುರ್ತು ಪರಿಹಾರ ಕಲ್ಪಿಸುವುದರ ಜತೆಗೆ ಗ್ರಾಮೀಣ ಉದ್ಯೋಗಾವಕಾಶಗಳ ಸೃಷ್ಟಿ, ಮೂಲಸೌಕರ್ಯಗಳ ಸುಧಾರಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಪ್ರಕಾಶ ಮೀನಾ ಅಧಿಕಾರಿಗಳಿಗೆ ಸೂಚನೆ ನೀಡಿದರು. 

          ಬಸವನಬಾಗೇವಾಡಿ ತಾಲೂಕಿನ ಬ್ಯಾಕೋಡ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಭೇಟಿ ನೀಡಿ, ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳು ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರೀಶೀಲಿಸಿದ ಅವರು, ಕುಡಿಯುವ ನೀರಿನ ಸಮಸ್ಯೆ ಕುರಿತು ಗ್ರಾಮಸ್ಥರೊಂದಿಗೆ ಸಂವಾದ ನಡೆಸಿ ಅಹವಾಲು ಆಲಿಸಿದರು. 

           ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಸಮಸ್ಯೆ ತಲೆದೋರಿದ ಸಂದರ್ಭ ಉದ್ಭವಿಸಿದರೆ ತಕ್ಷಣಕ್ಕೆ ಸ್ಪಂದಿಸಬೇಕು.ನಿರ್ಲಕ್ಷ್ಯವಹಿಸದೇ ಗಂಭೀರವಾಗಿ ಪರಿಗಣಿಸಿ ಸಮಸ್ಯೆಯಾಗದ ರೀತಿಯ ನಿರ್ವಹಣೆಗೆ ಅಧಿಕಾರಿಗಳಿಗೆ ಸೂಚಿಸಿದರು.

         ಕುಡಿಯುವ  ನೀರಿನ  ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಅಗತ್ಯಕ್ಕೆ ಅನುಗುಣವಾಗಿ  ಕೊಳವೆಬಾವಿಗಳನ್ನು ಕೊರೆಸಲು ಕ್ರಮ ವಹಿಸಬೇಕು ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

           ಅಂಗನವಾಡಿ- ಗ್ರಂಥಾಲಯದ ನಿರ್ವಹಣೆಗೆ ಆದ್ಯತೆ, ಬಳಿಕ ಅಂಗನವಾಡಿ ಕೇಂದ್ರ ಸಂಖ್ಯೆ 2ಕ್ಕೆ ಭೇಟಿ ನೀಡಿದ ಅವರು, ಮಕ್ಕಳ ಹಾಜರಾತಿ, ಪೌಷ್ಟಿಕ ಆಹಾರ ವಿತರಣೆ ಹಾಗೂ ಸಂಬಂಧಿತ ದಾಖಲೆಗಳನ್ನು ಪರೀಶೀಲಿಸಿದರು. ಮಕ್ಕಳಿಗೆ ನಿಗದಿತ ಪ್ರಮಾಣದಲ್ಲಿ ಪೌಷ್ಟಿಕ ಆಹಾರ ವಿತರಿಸುವುದು, ಕೇಂದ್ರದಲ್ಲಿ ಸ್ವಚ್ಛತೆ ಕಾಪಾಡುವುದು ಮತ್ತು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಚಿಸಿದರು. ಕೇಂದ್ರಕ್ಕೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಒದಗಿಸಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ  ಸೂಚಿಸಿದರು. 


ಸುದ್ದಿ ಓದಿ