ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಸ್ಥಳ ಪರೀಶೀಲನೆ
Inspection of sapling planting sites as part of World Environment Day
ಲೋಕದರ್ಶನ ವರದಿ
ಧಾರವಾಡ 03: ಮುಂದಿನ ಪೀಳಿಗೆಗೆ ಹಸಿರು ವಾತಾವರಣ ನಿರ್ಮಿಸಲು ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಜವಾಬ್ದಾರಿ ವಹಿಸಬೇಕು ಎಂದು ಅಡಿವೇಶ ಇಟಗಿ ಅಧ್ಯಕ್ಷರು ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ ಅವರು ಹೇಳಿದರು. ಅವರು ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ ಕೇಂದ್ರ ಕಛೇರಿ ವತಿಯಿಂದ ಜೂನ್ 5 ರಂದು ನಡೆಯಲಿರುವ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಧಾರವಾಡ ಗಾಂಧೀನಗರದ ಸ್ಕೂಲ್ ನಂಬರ್ ಹಿ 5 ರಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕಾಗಿ ಆಯ್ಕೆ ಮಾಡಲಾದ ಸ್ಥಳವನ್ನು ಅಡಿವೇಶ ಇಟಗಿ ಅಧ್ಯಕ್ಷರು ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ ಅವರು ಪರೀಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಉತ್ತೇಜನ ನೀಡುವ ಕುರಿತು ಚರ್ಚೆ ನಡೆಸಲಾಯಿತು. ಪರಿಸರದ ಸಮತೋಲನ ಕಾಪಾಡಲು ಹಾಗೂ ಮುಂದಿನ ಪೀಳಿಗೆಗೆ ಹಸಿರು ವಾತಾವರಣ ನಿರ್ಮಿಸಲು ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಜವಾಬ್ದಾರಿ ವಹಿಸಬೇಕು ಎಂದು ಅಡಿವೇಶ ಇಟಗಿ ಅವರು ಕರೆ ನೀಡಿದರು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದೆಂದು, ಹಾಗೂ ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮಾನ್ಯ ಅಧ್ಯಕ್ಷರು ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ ಇವರು ತಿಳಿಸಿರುತ್ತಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 