ಉಪಲೋಕಾಯುಕ್ತ ಕೆ.ಎನ್‌. ಫಣೀಂದ್ರರಿಂದ ಹೊಸ ಬಸ್ ನಿಲ್ದಾಣ ಪರೀಶೀಲನೆ

ಉಪಲೋಕಾಯುಕ್ತ ಕೆ.ಎನ್‌. ಫಣೀಂದ್ರರಿಂದ ಹೊಸ ಬಸ್ ನಿಲ್ದಾಣ ಪರೀಶೀಲನೆ  Inspection of the new bus station by Upalokayukta K.N. Phaneendra

ಗದಗ 6: ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್‌. ಪಣೀಂದ್ರ ಅವರು ಗುರುವಾರ ನಗರದ ಹೊಸ ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ವಿವಿಧ ವ್ಯವಸ್ಥೆಗಳ ಪರೀಶೀಲನೆ ನಡೆಸಿದರು. ಈ ವೇಳೆ ಕುಡಿಯುವ ನೀರಿನ ಘಟಕದಲ್ಲಿ ಪೂರೈಕೆಯಾಗುತ್ತಿರುವ ನೀರನ್ನು ಪರೀಕ್ಷೆಗೆ ಒಳಪಡಿಸಿ, ಅದು ಕುಡಿಯಲು ಯೋಗ್ಯವೇ ಎಂಬ ಕುರಿತು ತಕ್ಷಣ ವರದಿ ಪಡೆಯುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.  

ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಪ್ರಯಾಣಿಕರೊಂದಿಗೆ ಸಂವಾದ ನಡೆಸಿದ ಅವರು, ಪ್ರಯಾಣಿಕರಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳು ಹಾಗೂ ವ್ಯವಸ್ಥೆಗಳ ಕುರಿತು ಮಾಹಿತಿ ಕಲೆ ಹಾಕಿದರು. ನಿಲ್ದಾಣದಲ್ಲಿ ಸ್ವಚ್ಛತೆ, ಕುಡಿಯುವ ನೀರು, ಆಸನ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಸಮರ​‍್ಕವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.  

ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರಿಗೆ ಬಸ್‌ಗಳು ಸರಿಯಾದ ಸಮಯಕ್ಕೆ ಲಭ್ಯವಾಗುವಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಮನವಿ ಮಾಡಿದರು. ಸಾರ್ವಜನಿಕ ಸೇವೆಯಲ್ಲಿ ಯಾವುದೇ ವಿಳಂಬ ಅಥವಾ ಅಸಮರ​‍್ಕತೆ ಇರಬಾರದು ಎಂದು ಅವರು ಎಚ್ಚರಿಸಿದರು.