ಜಿ.ಪಂ. ಸಿಇಒ ರವರಿಂದ ವಿವಿಧ ಕಾಮಗಾರಿಗಳ ಪರೀಶೀಲನೆ
Inspection of various works by the CEO of Z.P.
ಕಾರವಾರ 25: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ತಾಲೂಕ ಪಂಚಾಯತ್ ಹಾಗೂ ತಾಲೂಕ ಆಸ್ಪತ್ರೆಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದೀಲೀಷ್ ಶಶಿ ಶುಕ್ರವಾರ ಭೇಟಿ ನೀಡಿ ಪರೀಶೀಲಿಸಿದರು.ಹಳಿಯಾಳ ತಾಲೂಕಿನ ಯಡೋಗ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾತ್ಮಣಿ ಗ್ರಾಮದಲ್ಲಿ ಅನುಷ್ಠಾನ ಗೊಂಡ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಡಬ್ಲೂಟಿಪಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ತಿಳಿಸಿದರು.
ನಂತರ ತಾಲೂಕ ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಯಲ್ಲಿರುವ ಸಿಬ್ಬಂದಿ ಕೊರತೆ, ತುರ್ತು ಸಂದರ್ಭದಲ್ಲಿ ಬಳಸುವ ಅಂಬುಲೆನ್ಸ್ ಗಳ ಸಂಖ್ಯೆ ಹಾಗೂ ಅದರಲ್ಲಿ ಕಾರ್ಯ ನಿರ್ವಹಿಸುವ ಸಹಾಯಕರ ಕುರಿತು ಮಾಹಿತಿ, ತುರ್ತು ಚಿಕಿತ್ಸೆ ಅವಶ್ಯವಿರುವ ರೋಗಿಗಳಿಗೆ ಹತ್ತಿರವಿರುವ ಜಿಲ್ಲಾಆಸ್ಪತ್ರೆ ಹಾಗೂ ಇನ್ನಿತರ ವಿಷಯಗಳ ಕುರಿತು ಮಾಹಿತಿ ಪಡೆದರು. ಮುಂದುವರಿದು ರೋಗಿಗಳ ತುರ್ತು ಚಿಕಿತ್ಸಾ ವಿಭಾಗಕ್ಕೆ ಭೇಟಿ ನೀಡಿ ಪರೀಶೀಲಿಸಿದರು.
ಈ ಸಂದರ್ಭದಲ್ಲಿ ತಾಲೂಕ ಪಂಚಾಯತನ ಕಾರ್ಯ ನಿರ್ವಾಹಕ ಅಧಿಕಾರಿ ವಿಲಾಸರಾಜ್ ಪ್ರಸನ್ನ, ಸಹಾಯಕ ಕಾರ್ಯ ಪಾಲಕ ಅಭಿಯಂತರ ಸತೀಶ್ ನಾಯಕ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ತಾಲೂಕ ಮಟ್ಟದ ಅಧಿಕಾರಿಗಳು, ವೈದ್ಯರು ಹಾಗೂ ತಾಲೂಕ ಪಂಚಾಯತ ಸಿಬ್ಬಂದಿಗಳು ಹಾಜರಿದ್ದರು..
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 