ಶಾಂತಿ, ಸುವ್ಯವಸ್ಥೆಯಿಂದ ಗಣೇಶೋತ್ಸವ ಆಚರಿಸಲು ಸೂಚನೆ
Instructions issued to celebrate Ganeshotsava peacefully and in an orderly manner
ಲೋಕದರ್ಶನ ವರದಿ
ಶಿಗಾಂವಿ 10: ಸರ್ಕಾರದ ಆದೇಶ ಹಾಗೂ ಪೊಲೀಸ್ ಇಲಾಖೆಯ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಶಾಂತಿ ಮತ್ತು ವಿಜೃಂಭಣೆಯಿಂದ ಗಣೇಶೋತ್ಸವ ಆಚರಿಸಬೇಕು ಎಂದು ಪೊಲೀಸ್ ಇನ್ಸ್ಪೆಕ್ಟರ್ (ಪಿಐ) ವೀರಭದ್ರಯ್ಯ ಹಿರೇಮಠ ಹೇಳಿದರು. ಪಟ್ಟಣದ ಅಂಬೇಡ್ಕರ್ ಸಂಕೀರ್ಣದಲ್ಲಿ ಆಯೋಜಿಸಿದ್ದ ಗಣೇಶೋತ್ಸವದ ಪೂರ್ವಭಾವಿ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಪಟ್ಟಣದಲ್ಲಿ ಶಾಂತಿ ಸಭೆಯ ಅಗತ್ಯತೆ ಇಲ್ಲದಿದ್ದರೂ ಸರ್ಕಾರದ ನಿರ್ದೇಶನದಂತೆ ಸಭೆ ನಡೆಸಲಾಗುತ್ತಿದೆ. ಯಾವುದೇ ವಿವಾದಾತ್ಮಕ ಸ್ಥಳಗಳಲ್ಲಿ ಗಣೇಶ ಮಂಟಪ ಹಾಕುವುದು ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದರು.
ಗಣೇಶ ಮೂರ್ತಿ ವಿಸರ್ಜನೆಯ ದಿನಾಂಕವನ್ನು ಪೂರ್ವಭಾವಿಯಾಗಿ ನಿಗದಿಪಡಿಸಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ ಅಗತ್ಯ ಅನುಮತಿಗಳನ್ನು ಪಡೆಯಬೇಕು. ಶಬ್ದ ಮಾಲಿನ್ಯ ಉಂಟುಮಾಡುವ ಹಾನಿಕಾರಕ ಧ್ವನಿವರ್ಧಕಗಳ ಬಳಕೆಗೆ ಅನುಮತಿ ಇರುವುದಿಲ್ಲ. ಪಿಒಪಿ (ಪ್ಲಾಸ್ಟರ್ ಆಫ್ ಪ್ಯಾರಿಸ್) ಗಣೇಶ ಮೂರ್ತಿಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದರು.
ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್ ಅಳವಡಿಸಲು ಮುಂಚಿತವಾಗಿ ಅನುಮತಿ ಪಡೆಯುವುದು ಕಡ್ಡಾಯ. ಗಣೇಶ ಮಂಟಪಗಳಲ್ಲಿ ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ಸರತಿ ವ್ಯವಸ್ಥೆ ಮಾಡಬೇಕು. ಮಂಟಪಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಗಣೇಶ ಮಂಡಳಿಯ ಸದಸ್ಯರು ಪೆಂಡಾಲ್ನಲ್ಲಿ ನಿರಂತರವಾಗಿ ಉಪಸ್ಥಿತರಿದ್ದು ಪೊಲೀಸ್ ಇಲಾಖೆಗೆ ಸಹಕರಿಸಬೇಕು. ಪೆಂಡಾಲ್ಗಳಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ದೂರವಾಣಿ ಸಂಖ್ಯೆಗಳನ್ನು ಪ್ರದರ್ಶಿಸಬೇಕು ಎಂದು ಸೂಚಿಸಿದರು. ಪೆಂಡಾಲ್ಗಳಲ್ಲಿ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡಬಾರದು. ನಿಯಮ ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 