ಮತದಾರರ ಪಟ್ಟಿ ಪರಿಷ್ಕರಣೆ ಪಾರದರ್ಶಕವಾಗಿ ನಡೆಸಲು ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ ಪಾರದರ್ಶಕವಾಗಿ ನಡೆಸಲು ಸೂಚನೆ  Instructions issued to conduct the revision of the electoral roll transparently

ಲೋಕದರ್ಶನ ವರದಿ 

ವಿಜಯಪುರ 5: ಜಿಲ್ಲೆಯ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯವನ್ನು ಯಾವುದೇ ಅರ್ಹ ಮತದಾರರು ಕೈಬಿಡದಂತೆ ಹಾಗೂ ಅನರ್ಹರು ಸೇರೆ​‍್ಡಯಾಗದಂತೆ ಅತ್ಯಂತ ಪಾರದರ್ಶಕವಾಗಿ ನಡೆಸುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅಧಿಕಾರಿಗಳಿಗೆ ಸೂಚಿಸಿದರು.  

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಗಸ್ಟ್‌ 4ರವರೆಗೆ ಜಿಲ್ಲೆಯಲ್ಲಿ ಒಟ್ಟು 16,79,495 ಗಣತಿ ನಮೂನೆಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ಆನ್ಲೈನ್ ಮೂಲಕ 4,069 ಮತದಾರರು ನಮೂನೆಗಳನ್ನು ಸಲ್ಲಿಸಿದ್ದಾರೆ ಎಂದು ತಿಳಿಸಿದರು.  

ಪರೀಶೀಲನಾ ಪ್ರಕ್ರಿಯೆಯಲ್ಲಿ 1,52,859 ಶಾಶ್ವತವಾಗಿ ಸ್ಥಳಾಂತರಗೊಂಡವರು, 54,549 ಮೃತ ಮತದಾರರು ಹಾಗೂ 63,602 ಗೈರುಹಾಜರು ಅಥವಾ ಪತ್ತೆಯಾಗದ ಮತದಾರರನ್ನು ಗುರುತಿಸಲಾಗಿದೆ. ಇದೇ ವೇಳೆ 29,623 ಹೊಸ ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ.  

ಮುದ್ದೇಬಿಹಾಳ, ದೇವರಹಿಪ್ಪರಗಿ, ಬಸವನಬಾಗೇವಾಡಿ, ಬಬಲೇಶ್ವರ, ವಿಜಯಪುರ ನಗರ, ನಾಗಠಾಣ, ಇಂಡಿ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬಿಎಲ್‌ಒಗಳು ಪ್ರಕ್ರಿಯೆಯನ್ನು ಚುರುಕುಗೊಳಿಸಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.  

ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಆಗಸ್ಟ್‌ 17ರಿಂದ ಸೆಪ್ಟೆಂಬರ್ 16, 2026ರವರೆಗೆ ಅವಕಾಶ ನೀಡಲಾಗಿದೆ. ಅರ್ಹ ಮತದಾರರು ಆನ್ಲೈನ್ ಅಥವಾ ಆಫ್ಲೈನ್ ಮೂಲಕ ನಮೂನೆ-6 ಸಲ್ಲಿಸಿ ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಸೇರೆ​‍್ಡ ಮಾಡಿಕೊಳ್ಳಬಹುದು. ಅಕ್ಟೋಬರ್ 1, 2026ಕ್ಕೆ 18 ವರ್ಷ ತುಂಬುವ ಯುವ ಮತದಾರರೂ ನೋಂದಣಿಗೆ ಅರ್ಹರಾಗಿರುತ್ತಾರೆ.  ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.