ಬಳ್ಳಾರಿ ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲಿ ಭದ್ರತೆ ಬಲಪಡಿಸಲು ಸೂಚನೆ
Instructions issued to strengthen security at all temples in Ballari district
ಲೋಕದರ್ಶನ ವರದಿ
ಬಳ್ಳಾರಿ, ಜುಲೈ 29: ಜಿಲ್ಲೆಯ ಎಲ್ಲಾ ದೇವಾಲಯಗಳ ಹುಂಡಿಗಳಿಗೆ ಸೂಕ್ತ ಭದ್ರತೆ ಒದಗಿಸಿ, 360 ಡಿಗ್ರಿ ಸಿಸಿಟಿವಿ ನಿಗಾ ವ್ಯವಸ್ಥೆ ಅಳವಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ರಫೀಕ್ ಎನ್. ಅಧಿಕಾರಿಗಳಿಗೆ ಸೂಚನೆ ನೀಡಿದರು.
ದೇವಾಲಯಗಳ ಹುಂಡಿ ಭದ್ರತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ 713 ದೇವಾಲಯಗಳಲ್ಲಿ ಈಗಾಗಲೇ 354 ದೇವಾಲಯಗಳಲ್ಲಿ ಸಿಸಿಟಿವಿ ಮಾನಿಟರಿಂಗ್ ಪೂರ್ಣಗೊಂಡಿದ್ದು, ಉಳಿದ ದೇವಾಲಯಗಳಲ್ಲೂ ಶೀಘ್ರವೇ ನಿಗಾ ವ್ಯವಸ್ಥೆ ಅಳವಡಿಸುವಂತೆ ಸೂಚಿಸಿದರು.
ಹುಂಡಿ ಎಣಿಕೆ ಕಾರ್ಯ ಸಂಪೂರ್ಣ ಸಿಸಿಟಿವಿ ಕಣ್ಗಾವಲಿನಲ್ಲಿ ನಡೆಯಬೇಕು. ಕಳವು ಹಾಗೂ ಇತರೆ ಅಕ್ರಮಗಳನ್ನು ತಡೆಯಲು ಡಿಜಿಟಲ್ ರೂಪದಲ್ಲಿ ಕಾಣಿಕೆ ಸ್ವೀಕರಿಸುವ ವ್ಯವಸ್ಥೆ ಕಲ್ಪಿಸುವ ಮೂಲಕ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಬಳ್ಳಾರಿಯ ಪ್ರಸಿದ್ಧ ಕನಕದುರ್ಗಮ್ಮ ದೇವಸ್ಥಾನದಲ್ಲಿ ಸಿಸಿಟಿವಿ ಮಾನಿಟರಿಂಗ್ ಕಾಮಗಾರಿಯನ್ನು ಏಳು ದಿನಗಳೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ದೇವಾಲಯಗಳ ಸೂಕ್ತ ಸ್ಥಳಗಳಲ್ಲಿ ಎಲ್ಲರಿಗೂ ಗೋಚರಿಸುವ ರೀತಿಯಲ್ಲಿ ಹುಂಡಿಗಳನ್ನು ಅಳವಡಿಸಿ ಭದ್ರತೆ ಹೆಚ್ಚಿಸಬೇಕು ಎಂದರು. ಜಿಲ್ಲೆಯಲ್ಲಿ 5 ‘ಎ’ ವರ್ಗ, 5 ‘ಬಿ’ ವರ್ಗ ಹಾಗೂ 703 ‘ಸಿ’ ವರ್ಗ ಸೇರಿ ಒಟ್ಟು 713 ದೇವಾಲಯಗಳಿದ್ದು, ಎಲ್ಲೆಡೆ ಭದ್ರತಾ ವ್ಯವಸ್ಥೆ ಬಲಪಡಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಹುಂಡಿ ಎಣಿಕೆ ಕಾರ್ಯದಲ್ಲಿ ಸರ್ಕಾರಿ ಸಿಬ್ಬಂದಿಗೆ ಮಾತ್ರ ಅವಕಾಶ ನೀಡಬೇಕು. ಜಿಲ್ಲಾ ಮಟ್ಟದ ಪರೀಶೀಲನಾ ಸಮಿತಿ ರಚಿಸಿ, ಪ್ರತಿ 15 ದಿನಗಳಿಗೊಮ್ಮೆ ಸಂಬಂಧಿಸಿದ ಅಧಿಕಾರಿಗಳು ದೇವಾಲಯಗಳಿಗೆ ಭೇಟಿ ನೀಡಿ ಪರೀಶೀಲನೆ ನಡೆಸಬೇಕು ಎಂದು ಸೂಚಿಸಿದರು.
ಹುಂಡಿ ಎಣಿಕೆ ವೇಳೆ ಯಾವುದೇ ಕಳವು ಅಥವಾ ಅಕ್ರಮ ಪ್ರಕರಣಗಳು ಕಂಡುಬಂದರೆ ಸಂಬಂಧಿಸಿದ ದೇವಾಲಯ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಪರಿಗಣಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 