ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ ಆಚರಿಸಲು ಸೂಚನೆ
Instructions to celebrate the Jayanti in a meaningful and organized manner.
ಲೋಕದರ್ಶನ ವರದಿ
ಶ್ರೀ ಹಡಪದ ಅಪ್ಪಣ್ಣ ಜಯಂತಿ ನಿಮಿತ್ತ ಪೂರ್ವಸಿದ್ಧತಾ ಸಭೆ
ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ ಆಚರಿಸಲು ಸೂಚನೆ
ಗದಗ, ಜು.16: ಶ್ರೀ ಹಡಪದ ಅಪ್ಪಣ್ಣ ಅವರ ಜಯಂತಿಯನ್ನು ಜುಲೈ 29ರಂದು ನಗರದ ಜಿಲ್ಲಾ ಆಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ ಆಚರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಶ್ರೀ ಹಡಪದ ಅಪ್ಪಣ್ಣ ಜಯಂತಿ ಆಚರಣೆ ಕುರಿತ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಲೂಕು ಮಟ್ಟದಲ್ಲಿಯೂ ಜಯಂತಿಯನ್ನು ಆಚರಿಸಬೇಕು. ಶಾಲಾ-ಕಾಲೇಜುಗಳು, ಗ್ರಾಮ ಪಂಚಾಯಿತಿಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಶ್ರೀ ಹಡಪದ ಅಪ್ಪಣ್ಣ ಅವರ ಜಯಂತಿ ಆಚರಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.
ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಮಾಜದ ಹಿರಿಯರನ್ನು ಹಾಗೂ ಎಸ್‌ಎಸ್‌ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳನ್ನು ಜಯಂತಿ ದಿನದಂದು ಸನ್ಮಾನಿಸಲಾಗುವುದು ಎಂದರು.
ಜಯಂತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ವಿವಿಧ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರು.
ಈ ಸಂದರ್ಭದಲ್ಲಿ ಊಟೋಪಹಾರ ವ್ಯವಸ್ಥೆ, ವೇದಿಕೆ ಸಿದ್ಧತೆ, ಬ್ಯಾನರ್ ಅಳವಡಿಕೆ, ಉಪನ್ಯಾಸಕರ ಆಯ್ಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು. ಸಮಾಜದ ಮುಖಂಡರು ಹಾಗೂ ಪದಾಧಿಕಾರಿಗಳು ತಮ್ಮ ಸಲಹೆ-ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ. ಮಸನಾಯಕ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಎಂ.ಎಂ. ತುಂಬರಮಟ್ಟಿ, ಸಮಾಜದ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ್ ವಿ. ಬಳ್ಳಾರಿ ಸ್ವಾಗತಿಸಿ, ವಂದಿಸಿದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 