ವಿಜಯಪುರ

ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲು ಸೂಚನೆ

ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲು ಸೂಚನೆ

ಲೋಕದರ್ಶನ ವರದಿ 

         ವಿಜಯಪುರ 15: ಜಿಲ್ಲೆಯಲ್ಲಿ ಮುಂಬರುವ ಜೂನ್ 27-ನಾಡಪ್ರಭು ಕೆಂಪೇಗೌಡ ಜಯಂತಿ, ಜೂನ್ 27 ರಂದು ನಾಡಪ್ರಭು ಕೆಂಪೇಗೌಡ ಹಾಗೂ ಜುಲೈ 02 ರಂದು ಡಾ. ಫ.ಗು. ಹಳಕಟ್ಟಿ ಜನ್ಮದಿನ ಹಾಗೂ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಯಾವುದೇ ಲೋಪವಿಲ್ಲದೆ, ಅತ್ಯಂತ ಅರ್ಥಪೂರ್ಣ ಹಾಗೂ ಅಚ್ಚುಕಟ್ಟಾಗಿ ಆಯೋಜಿಸುವಂತೆ ಅಪರ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ  ಜಯಂತಿ ಕಾರ್ಯಕ್ರಮಗಳ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಸೂಚನೆ ನೀಡಿದರು. ಜಯಂತಿ ಕಾರ್ಯಕ್ರಮಗಳ ಯಶಸ್ವಿ ಆಯೋಜನೆಗಾಗಿ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ವಹಿಸಲಾಗಿರುವ ಜವಾಬ್ದಾರಿಗಳನ್ನು ಎಲ್ಲರೂ ಸಮರ​‍್ಕವಾಗಿ ನಿರ್ವಹಿಸಬೇಕು. ಕಾರ್ಯಕ್ರಮಗಳ ನಿಮಿತ್ತ ಅಗತ್ಯವಿರುವ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮುಂಚಿತವಾಗಿಯೇ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು. 

ಜೂನ್ 27- ನಾಡಪ್ರಭು ಕೆಂಪೇಗೌಡ ಜಯಂತಿ, ಜೂನ್ 27ರಂದು ನಾಡಪ್ರಭು ಕೆಂಪೇಗೌಡ ಅವರ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮದೊಂದಿಗೆ ಆಚರಿಸಲಾಗುವುದು. ಜುಲೈ 02-ಡಾ. ಫ.ಗು. ಹಳಕಟ್ಟಿ ಜನ್ಮದಿನ ಹಾಗೂ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಉಪನ್ಯಾಸ ಕಾರ್ಯಕ್ರಮದೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗುವುದು. ಜುಲೈ 29- ಹಡಪದ ಅಪ್ಪಣ್ಣ ಜಯಂತಿಯನ್ನು ಜಿಲ್ಲಾಡಳಿತದ ವತಿಯಿಂದ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳು ವಿವರಿಸಿದರು. 

ಈ ಪೂರ್ವಭಾವಿ ಸಭೆಯಲ್ಲಿ ಮಹಾನಗರ ಪಾಲಿಕೆಯ ಉಪ ಆಯುಕ್ತ ಮಹಾವೀರ ಬೋರಣ್ಣನವರ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪುಂಡಲೀಕ ಮಾನವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಎಸ್‌. ಅಶೋಕಕುಮಾರ, ಎಸ್‌.ಜಿ. ಸುರಪುರ, ಎ.ಬಿ. ಅಂಕದ, ಗೀರೀಶ ಕುಲಕರ್ಣಿ, ದೇವೇಂದ್ರ ಮೆರೇಕರ, ಡಾ. ಎಂ.ಆರ್‌. ಗುರಿಕರ, ವಿದ್ಯಾವತಿ ಅಂಕಲಗಿ, ಸೋಮನಗೌಡ ಕಲ್ಲೂರ, ಭೀಮರಾಯ ಜಿಗಜಿಣಗಿ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಮಾಜದ ಮುಖಂಡರು ಮತ್ತು ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. 


ಸುದ್ದಿ ಓದಿ