ಅಂಬೇಡ್ಕರ ಭಾವಚಿತ್ರಕ್ಕೆ ಅವಮಾನ: ಕಿಡಗೇಡಿಗಳನ್ನು ಬಂಧಿಸುವಂತೆ ಒತ್ತಾಯ
ತಾಳಿಕೋಟೆ21: ತಾಲೂಕಿನ ಸಾಸನೂರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಅವಮಾನ ಮಾಡಿದ ಕಿಡಗೇಡಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಘುಬಣದ ಕಾರ್ಯಕರ್ತರು ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗೆ ಮನವಿಯನ್ನು ಸಲ್ಲಿಸಿದರು.
ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಎಲ್ಲ ಜನರಿಗೆ ಬದುಕಿನ ದಾರಿ ಕಲ್ಪಿಸಿಕೊಟ್ಟಿದ್ದಾರೆ. ಅಂತಹ ಮಹಾನ್ ವ್ಯಕ್ತಿಯ ಭಾವಚಿತ್ರಕ್ಕೆ ಕಿಡಗೇಡಿಗಳು ಎಲಿ ತಿಂದು ಉಗಳಿರುವದು ಅತ್ಯಂತ ಖೇದಕರ ಸಂಗತಿಯಾಗಿದೆ. ದೇವರ ಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ ಅವರ ಸ್ವಗ್ರಾಮದಲ್ಲಿಯೇ ಇಂತಹ ಘಟನೆ ನಡೆದಿದ್ದು ದುರಂತರದ ಸಂಗತಿಯಾಗಿದೆ. ಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಅವರು ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ಒದಗಿಸಲು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಬೇಕು ಹಾಗೂ ಅದೇ ಸ್ಥಳದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಮೂರ್ತಿಯನ್ನು ಪ್ರತಿಷ್ಠಾಪಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಂಘಟನೆಯ ಜಿಲ್ಲಾ ಅಧ್ಯಕ್ಷ ಶರಣು ಜಮಖಂಡಿ, ಉಪಾಧ್ಯಕ್ಷ ಚಂದ್ರಶೇಖರ ದೊಡಮನಿ ಮಾತನಾಡಿದರು. ಈ ಸಂದರ್ಭದಲ್ಲಿ ಸಂಘಟನೆಯ ಉಪಾಧ್ಯಕ್ಷ ಬಸವರಾಜ ಗುಂಡಕನಾಳ, ದೇವು ಗೊಟಗುಣಕಿ, ಶಂಕರ ಪಡಸಾಲಿ, ಶರಣು ತಳವಾರ, ದೇವರಾಜ ಮಾದರ, ಯಮನಪ್ಪ ಹಗರಗುಂಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಗಮೇಶ ನಡುವಿನಕೇರಿ, ನಿಂಗಣ್ಣ ಹೊಸಮನಿ, ಪರಶುರಾಮ ಸಾಗರ, ಕಾಶಿನಾಥ ನಾಟೀಕಾರ, ಮಲ್ಲು ನಾಟೀಕಾರ, ಎನ್.ಎಸ್.ಬಿಳಗಿ, ದೇವು ಚಟ್ನಳ್ಳಿ, ರವಿ ಹೂವಿನಹಿಪ್ಪರಗಿ, ದೇವಪ್ಪ ಪೂಜಾರಿ, ಗುರುಪ್ರಸಾದ ಬಿ.ಜಿ, ಪ್ರಭು ತಮದಡ್ಡಿ ಸೇರಿದಂತೆ ಇತರರು ಇದ್ದರು.