ಹೊಸಪೇಟೆಯಲ್ಲಿಂದು ಅಂತರ ಶಾಲಾ ವಿಜ್ಞಾನ ಮೇಳ : ಕಾರ್ಯಕ್ರಮ ಯಶಸ್ವಿಗೊಳಿಸಲು ಮನವಿ
Inter-school science fair in Hospet today: Appeal to make the program a success
ಕೊಪ್ಪಳ 28: ಶೈಕ್ಷಣಿಕ ವಿದ್ಯಾಭ್ಯಾಸ ಮತ್ತು ಸಂಶೋಧನೆಯ ಸಂಯೋಜನೆಯನ್ನು ಉತ್ತೇಜಿಸುವುದಕ್ಕಾಗಿ ಹೊಸಪೇಟೆ ಅಂತರ-ಶಾಲಾ ವಿಜ್ಞಾನ ಮೇಳವನ್ನು ಇದೇ ನವೆಂಬರ್ 29 ರಂದು ಶನಿವಾರ ಹೊಸಪೇಟೆಯ ಅಂಜುಮನ್ ಶಾದಿ ಮಹಲ್ನಲ್ಲಿ ಹಮ್ಮಿಕೊಳ್ಳಲಾಗಿದೆ. ಈ ವಿಜ್ಞಾನ ಮೇಳವು ಸಂಶೋಧನೆ ಆಧಾರಿತ ಶಿಕ್ಷಣಕ್ಕೆ ಒತ್ತು ನೀಡಲು ಹಾಗೂ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ಆಯೋಜಿಸಲಾಗಿದ್ದು, ಮ್ಯಾನೇಜಿಂಗ್ ಕಮಿಟಿ, ಮಸ್ಕಿದ್-ಎ-ತಯ್ಯಬಾ ವತಿಯಿಂದ ಎ.ಜೆ. ಅಕಾಡೆಮಿ ಫಾರ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಇವರ ಸಹಯೋಗದಲ್ಲಿ ನಡೆಯಲಿದೆ. ಈ ಮೇಳದಲ್ಲಿ, 4 ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಭಾಗವಹಿಸುವರು.ಈ ವಿಜ್ಞಾನ ಮೇಳದಲ್ಲಿ ಭೌತಿಕ ವಿಜ್ಞಾನ, ಜೈವಿಕ ವಿಜ್ಞಾನ ಮತ್ತು ಪರಿಸರ ವಿಜ್ಞಾನ ಎಂಬ ಮೂರು ವಿಭಾಗಗಳಲ್ಲಿ ನಗರದ ವಿವಿಧ ಶಾಲೆಗಳ ಸುಮಾರು 100 ವಿದ್ಯಾರ್ಥಿಗಳು ಸಂಶೋಧನೆ ಆಧಾರಿತ ಪ್ರಾಜೆಕ್ಟ್ಗಳನ್ನು ಪ್ರಸ್ತುತಪಡಿಸಲಿದ್ದಾರೆ. ಅವುಗಳಲ್ಲಿ ವೈಯಕ್ತಿಕ ಹಾಗೂ ಗುಂಪು ಪ್ರಾಜೆಕ್ಟ್ ಗಳು ಸೇರಿದೆ. ತಜ್ಞರ ಸಮಿತಿಯು ಅತ್ಯುತ್ತಮ ಯೋಜನೆಗಳಿಗೆ ಬಡಿಂಗ್ ಸೈಂಟಿಸ್ಟ್’, ’ಎಮರ್ಜಿಂಗ್ ಸೈಂಟಿಸ್ಟ್’ ಮತ್ತು ’ಯಂಗ್ ಸೈಂಟಿಸ್ಟ್’ ಎಂಬ ಪ್ರತಿಷ್ಠಿತ ಪ್ರಶಸ್ತಿಗಳು ನೀಡಲಾಗುತ್ತದೆ.
ಭಾಗವಹಿಸಿದ ಎಲ್ಲಾ ಶಾಲೆಗಳು, ವಿದ್ಯಾರ್ಥಿಗಳು ಮತ್ತು ಮಾರ್ಗದರ್ಶಕ ಶಿಕ್ಷಕರಿಗೆ ಪ್ರಮಾಣಪತ್ರಗಳು ನೀಡಲಾಗುತ್ತದೆ. ವಿಜ್ಞಾನ ಮೇಳವು ವೀಕ್ಷಿಸಲು ಅಂದು ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ಎಲ್ಲರಿಗೂ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಸಂಜೆ 4.30 ರಿಂದ 6.30 ರವರೆಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಈ ಮೇಳದಲ್ಲಿ ಎಲ್ಲಾ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳು, ಪೋಷಕರು, ಶಿಕ್ಷಣ ಪ್ರೇಮಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ, ಮಕ್ಕಳ ವೈಜ್ಞಾನಿಕ ಮನೋಭಾವವನ್ನು ಪ್ರೋತ್ಸಾಹಿಸಲು ಈ ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿಕೊಳ್ಳುತ್ತೇವೆ ಎಂದು ಕಾರ್ಯಕ್ರಮ ಸಂಘಟಾಕರುಗಳಾದ ಹೊಸಪೇಟೆಯ ಮಸ್ಜಿದೆ ತೈಯಬಾ ಆಡಳಿತ ಮಂಡಳಿಯ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿ ಸರ್ವರನ್ನು ಸ್ವಾಗತಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 