ಅಂತರರಾಷ್ಟ್ರೀಯ ರಕ್ತದಾನಿಗಳ ದಿನ
ಸಿರುಗುಪ್ಪ : ದಾನಗಳಲ್ಲೆ ಶ್ರೇಷ್ಠದಾನ ರಕ್ತದಾನ ಒಂದು ಯೂನಿಟ್ ರಕ್ತದಿಂದ ನಾಲ್ವರ ಜೀವ ಉಳಿಸಬಹುದಾಗಿದೆ ಇಂತಹ ಮಹತ್ವದ ಕಾರ್ಯದ ಕುರಿತು ಜನರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸಬೇಕಾಗಿದೆ ಪ್ರತಿ ವರ್ಷ ಜೂ 14ರಂದು ಅಂತರರಾಷ್ಟ್ರೀಯ ರಕ್ತದಾನಿಗಳ ದಿನ ಆಚರಿಸಲಾಗುತ್ತದೆ ಎಂದು ರಾಷ್ಟ್ರೀಯ ವಯಸ್ಕರ ಶಿಕ್ಷಣ ಸೆಂಟ್ರಲ್ ಕೌನ್ಸಿಲ್ ಮೈಸೂರು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸದಸ್ಯರು ಸಾಮಾಜಿಕ ಕಾರ್ಯಕರ್ತ ಅಬ್ದುಲ್ ನಬಿ ಅವರು ಹೇಳಿದರು.
ನಗರದ ಇಬ್ರಾಹಿಂ ಮಂಜಿಲ್ ನಲ್ಲಿ ಅಂತರರಾಷ್ಟ್ರೀಯ ರಕ್ತ ದಾನಿಗಳ ದಿನವನ್ನು ನೆನಪಿಸಿ ಅವರು ಮಾತನಾಡುತ್ತಾ ಈ ವರ್ಷ ರಕ್ತದಾನ ಮಾಡುವುದು ಒಗ್ಗಟ್ಟಿನ ಪ್ರಕ್ರಿಯೆ ಈ ಪ್ರಯತ್ನಕ್ಕೆ ಕೈಜೋಡಿಸಿ ಜೀವ ಉಳಿಸೋಣ ಎಂಬ ಘೋಷ ವಾಕ್ಯದೊಂದಿಗೆ ಸರ್ಕಾರ ರಕ್ತ ನಿಧಿಗಳು ಹಾಗೂ ಸಂಘ ಸಂಸ್ಥೆಗಳು ರಾಜ್ಯದಂತ ರಕ್ತದಾನ ಶಿಬಿರಗಳನ್ನು ಆಯೋಜಿಸಿವೆ ಜೊತೆಗೆ ರಕ್ತದಾನಿಗಳನ್ನು ಪ್ರೋತ್ಸಾಹಿಸಲು ಅತಿ ಹೆಚ್ಚು ಬಾರಿ ರಕ್ತದಾನ ಮಾಡುವವರನ್ನು ಗುರುತಿಸಿ ಗೌರವಿಸುವ ಕಾರ್ಯವು ನಡೆಯುತ್ತಿದೆ ಇಂಟರ್ನ್ಯಾಷನಲ್ ಫೆಡರೇಶನ್ ಆಫ್ ರೆಡ್ ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಸೊಸೈಟಿ ಇಂಟರ್ನ್ಯಾಷನಲ್ ಫೆಡರೇಷನ್ ಆಫ್ ಬ್ಲಡ್ ಡೋನರ್ ಆರ್ಗನೈಸೇಶನ್ ಮತ್ತು ಇಂಟರ್ನ್ಯಾಷನಲ್ ಸೊಸೈಟಿ ಆಫ್ ಬ್ಲಡ್ ಟ್ರಾನ್ಸ್ ಟ್ಯೂಷನ್ ಸಹಯೋಗದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯು ವಿಶ್ವ ರಕ್ತ ದಾನಿಗಳ ದಿನವನ್ನು ಘೋಷಿಸಿದೆ ರಕ್ತ ದಾನಿಗಳನ್ನು ಪ್ರೇರೇಪಿಸಲು ಪ್ರತಿ ವರ್ಷ ಯುವ ರಕ್ತದಾನಿಗಳ ದಿನ ಜೂ 14ರಂದು ವಿಶ್ವ ರಕ್ತ ದಾನಿಗಳ ದಿನ ಆಚರಿಸಲಾಗುತ್ತದೆ 18 ರಿಂದ 65 ವರ್ಷದೊಳಗಿನ ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿ ಕನಿಷ್ಠ 45 ಕೆಜಿ ದೇಹದ ತೂಕ ಇರುವವರು 350 ಎಂಎಲ್ ಹಾಗೂ 55 ಕೆಜಿಗಿಂತ ಅಧಿಕ ತೂಕ ಇರುವವರು 450 ಎಂಎಲ್ ರಕ್ತದಾನ ಮಾಡಬಹುದಾಗಿದೆ ರಕ್ತದಿಂದ ನಾಲ್ಕು ಜೀವಗಳನ್ನು ಉಳಿಸಬಹುದಾಗಿದೆ ಎಂದು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸದಸ್ಯ ಅಬ್ದುಲ್ ನಬಿ ಅವರು ರಕ್ತದಾನ ಮಾಡಿ ಜೀವ ಉಳಿಸಬೇಕು ಎಂದು ಸರ್ವರಲ್ಲಿ ಕೋರಿದ್ದಾರೆ.