ಹೂವಿನಹಡಗಲಿಯಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

 ಹೂವಿನಹಡಗಲಿಯಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ   International Day of Democracy celebration in Hoovina Hadagali


ಹೂವಿನಹಡಗಲಿ: ಸೆ.15: ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ತಾಲೂಕು ಆಡಳಿತ, ಸಮಾಜ ಕಲ್ಯಾಣ ಹಾಗೂ ಶಿಕ್ಷಣ ಇಲಾಖೆಗಳ ವತಿಯಿಂದ ಮಂಗಳವಾರ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಡೆಯಿತು.  

ಶಾಸಕ ಕೃಷ್ಣನಾಯಕ ಅವರು ‘ಮಾನವ ಸರಪಳಿ’ ಹಾಗೂ ಯುವ ‘ಸಂಸತ್ ಸಭೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಉದಾತ್ತ ಚಿಂತನೆಗಳನ್ನು ಸಾರುವ ನಮ್ಮ ಸಂವಿಧಾನವೇ ನಮ್ಮ ಹೆಮ್ಮೆ. ಸಂವಿಧಾನ ರಚಿಸಿದ ಡಾ. ಬಿ.ಆರ್‌. ಅಂಬೇಡ್ಕರ್ ಅವರನ್ನು ಸ್ಮರಿಸುವ ದಿನ ಇದಾಗಿದ್ದು, ಅವರ ಆಶಯಗಳನ್ನು ಪ್ರತಿಯೊಬ್ಬರೂ ಅನುಸರಿಸಬೇಕು ಎಂದು ಹೇಳಿದರು.  

ಸಮಾಜ ಕಲ್ಯಾಣ ಇಲಾಖೆಯ ಜ್ಯೋತಿ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎ. ಕೋಟ್ರಗೌಡ, ತಾ.ಪಂ. ಇಒ ಪರಮೇಶ್ವರ ಸೇರಿದಂತೆ ಹಲವರು ಮಾತನಾಡಿದರು.  ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ಪುತೇರೇಶ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಮಂಗಳಾ, ಕೋಟೆಪ್ಪ, ಮಂಜುನಾಥ ಜೈನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಪಟ್ಟಣದ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು.