ಮುಂದಗೋಡ

ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ

ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ  ಕಾರ್ಯಕ್ರಮ

ಮುಂಡಗೋಡ 16: ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ ಮುಂಡಗೋಡ ಹಾಗೂ ಅಭಿಯೋಜನಾ ಇಲಾಖೆ ಮುಂಡಗೋಡ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮುಂಡಗೋಡ ಹಾಗೂ ಲೊಯೋಲ ಸಂಯುಕ್ತ ಪದವಿ ಪೂರ್ವ ಕಾಲೇಜು, ಮುಂಡಗೋಡ ಇವರ ಸಂಯುಕ್ತ ಆಶ್ರಯದಲ್ಲಿ  ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಕಾರ್ಯಕ್ರಮವನ್ನು ಗೌರವಾನ್ವಿತ ನ್ಯಾಯಾಧೀಶರಾದ ಅಕ್ಷತಾ ಸಿ .ಆರ್‌.ರವರು ಉದ್ಘಾಟಣೆ ಕಾರ್ಯಕ್ರಮವನ್ನು ನೇರವಹಿಸಿದ್ದರು.   

ಗೌರವಾನ್ವಿತ ನ್ಯಾಯಾಧೀಶರಾದ ಅಕ್ಷತಾ ಸಿ .ಆರ್‌. ರವರು ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮದ ಮಹತ್ವದ ಬಗ್ಗೆ ಹಲವು ಬಗೆಯ ಉದಾಹರಣೆಯನ್ನು ನೀಡಿ ಮಕ್ಕಳಿಗೆ ಮಾಹಿತಿಯನ್ನು ನೀಡಿದರು   ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕರಾದ ರೂಪಾ ಅಂಗಡಿ ರವರು ಮಾತನಾಡುತ್ತ ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ತಮ್ಮ ಇಲಾಖೆ ಯಿಂದ ಇರುವ ಸೌಲಭ್ಯಗಳ ಕುರಿತು ತಿಳಿಸಿದರು. ಮುಂಡಗೋಡ ನ್ಯಾಯಾಲಯದ ಪ್ಯಾನಲ್ ವಕೀಲರಾದ ಆರ್‌. ಎಸ್‌. ಹಂಚಿನಮನಿ ರವರು ಮಾನಸಿಕ ಅಸ್ವಸ್ಥರಿಗೆ ಮತ್ತು ಮಾನಸಿಕ ಅಂಗವಿಕಲರಿಗೆ ಇರುವ ಕಾನೂನು ಸೇವೆಗಳ ಕುರಿತು ಮಕ್ಕಳಿಗೆ ತಿಳಿಸಿದರು.   

ಈ ಕಾರ್ಯಕ್ರಮಕ್ಕೆ ಸಹಾಯಕ ಸರಕಾರಿ ಅಭಿಯೋಜಕರಾದ ಪ್ರಸಾದ ರಮೇಶ ಹೆಗಡೆ ಹಾಗೂ ವಕೀಲರ ಸಂಘದ ಅಧ್ಯಕ್ಷರಾದ ನಟರಾಜ ಎಸ್ ಕಾತೂರು ಮತ್ತು ಪ್ಯಾನಲ್ ವಕೀಲರಾದ ಜಿ.ಆರ್‌. ಆಲದಕಟ್ಟಿ ರವರು ಮತ್ತು ಕಾಲೇಜಿನ ಪ್ರಾಂಶುಪಾಲರಾದ ಮಾದೇವ ರಾಥೋಡ ರವರು ಹಾಜರಿದ್ದರು. ಈ ಕಾರ್ಯಕ್ರಮವನ್ನು ಸಮಾಜಶಾಸ್ತ್ರ ಉಪನ್ಯಾಸಕರಾದ ನಿತ್ಯಾನಂದ ಪಟಗಾರ ರವರು ಹಾಗೂ ವಂದಾರ್ಣಪಣೆಯನ್ನು ವಕೀಲರಾದ ನಾಗರಾಜ ಬಾರ್ಕಿ ರವರು ನಡೆಸಿಕೊಟ್ಟರು. 


ಸುದ್ದಿ ಓದಿ