ಜಮಖಂಡಿ

ಸೆ.15 ರಂದು ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಸೆ.15 ರಂದು ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಜಮಖಂಡಿ 12: ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸೆ.15 ರಂದು ತಾಲೂಕಾ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಭಾರತದ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದುವುದರ ಮುಖಾಂತರ ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲಾಗುವುದು. 

ಅಂದು ಬೆಳಿಗ್ಗೆ 10 ಕ್ಕೆ ಭಾರತ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದುವುದರ ಮುಖಾಂತರ ಜಗತ್ತಿನ ಅತೀ ಹೆಚ್ಚು ಜನರು ಏಕಕಾಲಕ್ಕೆ ಸಂವಿಧಾನದ ಪೀಠಿಕೆ ಓದಿದ ವಿಶ್ವದಾಖಲೆ ನಿರ್ಮಿಸಲು ಯೋಜನೆಯನ್ನು ರೂಪಿಸಲಾಗಿದೆ. ಈ ಪ್ರಯುಕ್ತ ತಾಲೂಕಿನ ಎಲ್ಲ ಸರ್ಕಾರಿ ಕಚೇರಿ ಅಧಿಕಾರಿಗಳು, ನೌಕರರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸ್ವಸಹಾಯ ಸಂಘ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಕೂಡಾ ಈ ಕಾರ್ಯದಲ್ಲಿ ಭಾಗವಹಿಸಬಹುದು. ಈ ಕಾರ್ಯಾಕ್ರಮ ಅನುಷ್ಠಾನಗೊಳಿಸಲು ವೆಬ್‌ಸೈಟ್‌ನ್ನು ತಯಾರಿಸಲಾಗಿದ್ದು, ವೆಬ್‌ಸೈಟ್ ಣಣಠಿ://ಣಜಠಿಡಿಜಚಿಟಛಟಜತಿಜಞಚಿಡಿ.ಟಿ/್ಖಠಜ ನ ಮುಖಾಂತರ ಸೆ-12 ರ ಸಂಜೆ 6 ಗಂಟೆಯೊಳಗಾಗಿ ನೊಂದಣಿ ಮಾಡಿಕೊಂಡು ಸೆ-15 ರಂದು ಬೆಳಿಗ್ಗೆ 10 ಗಂಟೆಗೆ ಸಂವಿಧಾನದ ಪೀಠಿಕೆಯನ್ನು ಓದುವ ಮುಖಾಂತರ ಯಶಸ್ವಿಗೊಳಿಸಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ನೆನಪಿಗಾಗಿ ಪ್ರಮಾಣ ಪತ್ರ ನೀಡಲಾಗುವುದೆಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗಡದೇವರಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಸುದ್ದಿ ಓದಿ