ಎಸ್.ವಿ. ಬುರ್ಲಿ ದಂಪತಿಗೆ ಅಂತರಾಷ್ಟ್ರೀಯ ಫೆಲೋಷಿಪ್ ಪ್ರಶಸ್ತಿ
International Fellowship Award for S.V. Burli couple
ವಿಜಯಪುರ, ಮೇ 29: ಜಿಲ್ಲೆಯ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ನಿವೃತ್ತ ಮುಖ್ಯೋಪಾಧ್ಯಾಯ ಎಸ್.ವಿ. ಬುರ್ಲಿ ಮತ್ತು ಜೀವಶಾಸ್ತ್ರ ಉಪನ್ಯಾಸಕಿ ಜಯಶ್ರೀ ಬುರ್ಲಿ ದಂಪತಿಗೆ ಇಂಡೋ-ನಾಮ್ ಸೈಂಟಿಫಿಕ್ ಸಮ್ಮಿತ್-2026 ಫೆಲೋಷಿಪ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ವಿಯೆಟ್ನಾಂ ದೇಶದ ಡನಾಂಗ್ ನಗರದಲ್ಲಿ ಮೇ 22ರಂದು ನಡೆದ ಅಂತರಾಷ್ಟ್ರೀಯ ವೈಜ್ಞಾನಿಕ ಸಮ್ಮೇಳನದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗಣಿತ ಗಮ್ಮತ್ತು ಲೇಖನಗಳು ಮತ್ತು ಉಪನ್ಯಾಸಗಳ ಮೂಲಕ ಗುರುತಿಸಿಕೊಂಡಿರುವ ಎಸ್.ವಿ. ಬುರ್ಲಿ ಅವರು, 400ಕ್ಕೂ ಹೆಚ್ಚು “ನಿತ್ಯ ಜೀವನದಲ್ಲಿ ವಿಜ್ಞಾನ ಮತ್ತು ಪವಾಡ ಬಯಲು” ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜನಮನ ಗೆದ್ದಿದ್ದಾರೆ.
ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಅಧ್ಯಕ್ಷ ಡಾ. ಹುಲಿಕಲ್ ನಟರಾಜ್, ಗುರುಮಿಠಕಲ್ ಖಾಸಾ ಮಠದ ಪೂಜ್ಯ ಶ್ರೀ ಶಾಂತವೀರ ಮಹಾಸ್ವಾಮೀಜಿ, ಪೂಜ್ಯ ಶ್ರೀ ಶಿವಬಸವ ಸ್ವಾಮೀಜಿ, ಪೂಜ್ಯ ಶ್ರೀ ಶಿವಾನಂದ ಸ್ವಾಮೀಜಿ, ವಿಶ್ವಾರಾಧ್ಯ ಸತ್ಯಂ ಪೇಟೆ, ಭಾರತೀಯ ರಾಯಭಾರಿ ಪ್ರದೀಪಕುಮಾರ ಹಾಗೂ ಇತರ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.ಈ ಸಾಧನೆಗೆ ಪರಿಷತ್ತಿನ ರಾಜ್ಯ ಉಪಾಧ್ಯಕ್ಷೆ ಉಷಾದೇವಿ ಹಿರೇಮಠ, ಗೌರವಾಧ್ಯಕ್ಷ ಜಂಬುನಾಥ ಕಂಚ್ಯಾಣಿ, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಮಿಸಾಳೆ, ಉಪಾಧ್ಯಕ್ಷರಾದ ಬಿ.ಎ. ಆಸಂಗಿ ಹಾಗೂ ಬಿ.ಐ. ಪರಂಡಿ, ಖಜಾಂಚಿ ಮಹಾದೇವ ದೇವರ, ಜಿಲ್ಲಾ ಸಂಚಾಲಕ ರಾಜಕುಮಾರ ಅರಗೆ, ನಿರ್ದೇಶಕ ಬಸವರಾಜ ಚೌಧರಿ ಸೇರಿದಂತೆ ವಿವಿಧ ಪದಾಧಿಕಾರಿಗಳು ಹಾಗೂ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು 