ಕಾರವಾರ

ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ

ಕಾರವಾರ. ಸೆ.6: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ವಯಸ್ಕರ ಶಿಕ್ಷಣ ಕಾರ್ಯಾಲಯ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ಸೆ.8 ರಂದು  ಬೆಳಗ್ಗೆ 10.30 ಕ್ಕೆ  ಕಾಜುಬಾಗದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.  

ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಉಸ್ತುವಾರಿ ಸಚಿವರಾದ ಮಾಂಕಾಳ ಎಸ್‌. ವೈದ್ಯ, ಉದ್ಘಾಟಿಸಲಿದ್ದಾರೆ. 

ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಸಂಸದರಾದ ಅನಂತ ಕುಮಾರ ಹೆಗಡೆ, ಶಾಸಕರಾದ ಆರ್‌.ವಿ. ದೇಶಪಾಂಡೆ, ಅರಬೈಲ್ ಶಿವರಾಮ ಹೆಬ್ಬಾರ್, ದಿನಕರ ಕೆ. ಶೆಟ್ಟಿ, ಸತೀಶ್ ಕೆ. ಸೈಲ್, ಭೀಮಣ್ಣ ಟಿ. ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಎಸ್‌.ವಿ. ಸಂಕನೂರು, ಶಾಂತಾರಾಮ ಬುಡ್ನ ಸಿದ್ದಿ, ಗಣಪತಿ ಉಳ್ವೆಕರ ಮತ್ತಿತರು ಪಾಲ್ಗೊಳ್ಳಲಿದ್ದಾರೆ. 


ಸುದ್ದಿ ಓದಿ