ಸಹಭಾಗಿತ್ವದಲ್ಲಿ ವಿಶ್ವ ಯೋಗ ದಿನಾಚರಣೆ
International Yoga Day celebration in partnership
ಶಿಗ್ಗಾವಿ 23 : ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿಕ್ಕಬೆಂಡಿಗೇರಿ ಹಾಗೂ ಮಧುಸೂದನ ಛಬ್ಬಿ ಸೇವಾ ಸಂಸ್ಥೆ (ರಿ) ಶಿಗ್ಗಾಂವ ಇವರ ಸಹಭಾಗಿತ್ವದಲ್ಲಿ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು. ಸಂಸ್ಥೆಯ ಸಂಸ್ಥಾಪಕಿ ಭಾರತಿ ವರ್ಧಮಾನ ಛಬ್ಬಿ ಇವರು ಮಕ್ಕಳಿಗೆ ಯೋಗಾಭ್ಯಾಸ ಮಾಡಿಸಿದರು. ಶಾಲೆಯ ಮುಖ್ಯ ಶಿಕ್ಷಕ ವ್ಹಿ ಡಿ ಛಬ್ಬಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಬಿ ವಾಯ್ ಉಪ್ಪಾರ ಯೋಗದ ಮಹತ್ವ ತಿಳಿಸಿದರು. ಮಧುಸೂದನ್ ಛಬ್ಬಿ ಸೇವಾ ಸಂಸ್ಥೆ ಅಧ್ಯಕ್ಷೆ ಭಾರತಿ ವರ್ಧಮಾನ್ ಛಬ್ಬಿ ಅವರಿಗೆ ಶಾಲೆಯ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶಿಕ್ಷಕಿ ಆರ್ ಆರ್ ಓಣಿಮನಿ, ಕುಮಾರಿ ಬಿ ಎಸ್ ಸಿಂಧೆ ಹಾಗೂ ಉರ್ದು ಶಾಲೆಯ ಮುಖ್ಯ ಶಿಕ್ಷಕ ಬಿ ಸಿ ಪೊಲೀಸಪಾಟೀಲ, ಕುಮಾರಿ ದಾಧಿಮಾ ಸಾರಾವರಿ ಹಾಗೂ ಶಾಲೆಯ ಅಡುಗೆ ಸಿಬ್ಬಂದಿ ಮತ್ತು ಮಕ್ಕಳು ಉಪಸ್ಥಿತರಿದ್ದರು.ಶಿಕ್ಷಕ ಇರ್ಫಾನಅಲಿ ಕೆರೂರ ನಿರೂಪಿಸಿದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 