ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ International Yoga Day on June 21st

 ಬೆಳಗಾವಿ 16: ಜಿಲ್ಲೆಯ ಎಲ್ಲಾ ಸಿ.ಎಸ್‌.ಸಿ  ವಿಲೇಜ್ ಲೆವೆಲ್ ಎಂಟರ್‌ಪ್ರಿನಿಯರ್‌ಗಳು ಜೂನ್ 21 ರಂದು ಆಚರಿಸಲಾಗುವ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಸಕ್ರಿಯವಾಗಿ ಭಾಗವಹಿಸಿ ಯೋಗದ ಮಹತ್ವವನ್ನು ಸಾರ್ವಜನಿಕರಿಗೆ ತಲುಪಿಸುವಂತೆ ಸಿ.ಎಸ್‌.ಸಿ   ಜಿಲ್ಲಾ ವ್ಯವಸ್ಥಾಪಕರಾದ ಮಲ್ಲಿಕಾರ್ಜುನ ಕರೆರುದ್ರನ್ನವರ ಅವರು ತಿಳಿಸಿದ್ದಾರೆ. ಸಿ.ಎಸ್‌.ಸಿ  ಕೇಂದ್ರಗಳು ಗ್ರಾಮೀಣ ಭಾಗದಲ್ಲಿ ಸರ್ಕಾರಿ ಸೇವೆಗಳನ್ನು ಜನರಿಗೆ ತಲುಪಿಸುವುದರ ಜೊತೆಗೆ ಸಾಮಾಜಿಕ ಜಾಗೃತಿ ಮೂಡಿಸುವ ಪ್ರಮುಖ ಕೇಂದ್ರಗಳಾಗಿದ್ದು, ಆರೋಗ್ಯಕರ ಸಮಾಜ ನಿರ್ಮಾಣದಲ್ಲಿಯೂ ಮಹತ್ವದ ಪಾತ್ರವಹಿಸುತ್ತಿವೆ.

ಆದ್ದರಿಂದ ಜಿಲ್ಲೆಯ ಎಲ್ಲಾ ಗಿಐಇ ಗಳು ವಿದ್ಯಾರ್ಥಿಗಳು, ಯುವಕರು, ಮಹಿಳೆಯರು, ರೈತರು ಹಾಗೂ ಸಾರ್ವಜನಿಕರಲ್ಲಿ ಯೋಗದ ಕುರಿತು ಅರಿವು ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಯೋಗ ದಿನಾಚರಣೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಬೇಕು ಎಂದು ತಿಳಿಸಿದ್ದಾರೆ.  ಯೋಗದ ಮೂಲಕ ಆರೋಗ್ಯಕರ ಮತ್ತು ಸದೃಢ ಸಮಾಜ ನಿರ್ಮಾಣ ಸಾಧ್ಯವಾಗಿದ್ದು, ಪ್ರತಿಯೊಬ್ಬ ಅಖಅ ಗಿಐಇ ತಮ್ಮ ವ್ಯಾಪ್ತಿಯಲ್ಲಿ ಯೋಗದ ಸಂದೇಶವನ್ನು ಮನೆಮನೆಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಅವರು ಕರೆ ನೀಡಿದ್ದಾರೆ.ಆರೋಗ್ಯಕರ ಸಮಾಜ ನಿರ್ಮಾಣದ ಈ ರಾಷ್ಟ್ರೀಯ ಅಭಿಯಾನದಲ್ಲಿ ಬೆಳಗಾವಿ ಜಿಲ್ಲೆಯ ಎಲ್ಲಾ ಅಖಅ ಗಿಐಇ ಗಳು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದ್ದಾರೆ.