ಜೆ.ಎಸ್.ಎಸ್ ಮಂಜುನಾಥೇಶ್ವರ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ಅಂತರರಾಷ್ಟ್ರೀಯ ಕೀರ್ತಿ
International acclaim for JSS Manjunatheshwara English Medium School
ಲೋಕದರ್ಶನ ವರದಿ
ಧಾರವಾಡ 19 : ಜೆ.ಎಸ್.ಎಸ್ ಮಂಜುನಾಥೇಶ್ವರ ಇಂಗ್ಲಿಷ್ ಮೀಡಿಯಂ ಸ್ಕೂಲ್, ಮೃತ್ಯುಂಜಯ ನಗರ, ಧಾರವಾಡದ ವಿದ್ಯಾರ್ಥಿಗಳಾದ ಅರ್ಮಾನ್ ಅಮೀರ್ಜಾನ್ ಕಲ್ಲಿಮಣಿ (3ನೇ ತರಗತಿ) ಮತ್ತು ಶಫೀನ್ ಕಲ್ಲಿಮಣಿ (5ನೇ ತರಗತಿ) ಅವರು ಧಾರವಾಡದ ಟೆಕ್ವೆಂಡೋ, ಕರ್ನಾಟಕ ತಂಡವನ್ನು ಪ್ರತಿನಿಧಿಸಿ, ಭಾರತದ ಪರವಾಗಿ ಥಾಯ್ಲೆಂಡ್ನ ಪಟ್ಟಾಯ ಸಿಟಿ, ಚೋನ್ಬುರಿಯಲ್ಲಿ ನಡೆದ 9ನೇ ಹೀರೋಸ್ ಟೆಕ್ವೆಂಡೋ ಇಂಟರ್ ನಾಶನಲ್ ಚಾಂಪಿಯನ್ಶಿಪ್ 2026 ರಲ್ಲಿ ಭಾಗವಹಿಸಿ ಅದ್ಭುತ ಸಾಧನೆ ಮಾಡಿದ್ದಾರೆ ವಿಭಾಗದಲ್ಲಿ ಸ್ಪರ್ಧಿಸಿದ ಇಬ್ಬರೂ ವಿದ್ಯಾರ್ಥಿಗಳು ಕಂಚಿನ ಪದಕಗಳನ್ನು ಗೆದ್ದು, ನಮ್ಮ ಶಾಲೆ ಹಾಗೂ ದೇಶಕ್ಕೆ ಹೆಮ್ಮೆಯ ಕ್ಷಣವನ್ನು ತಂದಿದ್ದಾರೆ. ಈ ಹೆಮ್ಮೆಯ ಸಾಧನೆಗೆ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದ, ಆಡಳಿತಾಧಿಕಾರಿಗಳಾದ ಅರಿಹಂತ ಪ್ರಸಾದ, ಜೆ.ಎಸ್.ಎಸ್ ಐ.ಟಿ.ಐ ಕಾಲೇಜಿನ ಪ್ರಾಚಾರ್ಯರಾದ ಮಹಾವೀರ ಉಪಾಧ್ಯೆ ಸರ್ ಹಾಗೂ ಪ್ರಾಚಾರ್ಯೆ ತ್ರಿವೇಣಿ ಆರ್ ಅವರು ಅಭಿನಂದಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 