ಅಂತಾರಾಷ್ಟ್ರೀಯ ವಿಮಾನ ಸೇವೆ ನಿಷೇಧ ಮೇ 31ರವರೆಗೆ ವಿಸ್ತರಣೆ
ನವದೆಹಲಿ, ಏ 30: ಕೋವಿಡ್-19 ಪ್ರಕರಣಗಳ ಗಣನೀಯ ಏರಿಕೆಯ ಹಿನ್ನೆಲೆಯಲ್ಲಿ ನಿಗದಿತ ಅಂತರರಾಷ್ಟ್ರೀಯ ವಿಮಾನಗಳ ನಿಷೇಧವನ್ನು ಒಂದು ತಿಂಗಳವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.
ಗರಿಕ ವಿಮಾನಯಾನ ನಿರ್ದೇಶನಾಲಯ ಜನರಲ್ ಶುಕ್ರವಾರ ಹೊರಡಿಸಿರುವ ಸುತ್ತೋಲೆಯಲ್ಲಿ, ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗಳಿಗೆ ಸಂಬಂಧಿಸಿದಂತೆ ಮೇ 31ರವರೆಗೆ ಭಾರತದ ಎಲ್ಲಾ ಅಂತಾರಾಷ್ಟ್ರೀಯ ವಿಮಾನ ಸೇವೆಗಳನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ಈ ನಿರ್ಬಂಧವು ಅಂತರರಾಷ್ಟ್ರೀಯ ಸರಲಿ ಸಾರಿಗೆ ಕಾರ್ಯಾಚರಣೆಗಳು ಮತ್ತು ಡಿಜಿಸಿಎ ನಿರ್ದಿಷ್ಟವಾಗಿ ಅನುಮೋದಿಸಿದ ವಿಮಾನಗಳಿಗೆ ಅನ್ವಯಿಸುವುದಿಲ್ಲ.