ಕಾರವಾರ

ವಿವಿಧ ಬ್ಯಾಂಕ್‍ಗಳಲ್ಲಿ 4 ಖಾತೆ ತೆರೆದು ಹಣ ವರ್ಗಾಯಿಸಿಕೊಳ್ಳುತ್ತಿದ್ದ ಅಂತರರಾಜ್ಯ ಸೈಬರ್ ಕ್ರೈಂ ವಂಚಕರ ಸೆರೆ

ವಿವಿಧ ಬ್ಯಾಂಕ್‍ಗಳಲ್ಲಿ 4 ಖಾತೆ ತೆರೆದು ಹಣ ವರ್ಗಾಯಿಸಿಕೊಳ್ಳುತ್ತಿದ್ದ ಅಂತರರಾಜ್ಯ ಸೈಬರ್ ಕ್ರೈಂ ವಂಚಕರ ಸೆರೆ

ಕಾರವಾರ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚನೆ ಮಾಡುತ್ತಿದ್ದ ರಾಜ್ಯ ಹಾಗೂ ಹೊರ ರಾಜ್ಯದ ಸೈಬರ್ ಕ್ರೈಂ ವಂಚಕರನ್ನು ಉತ್ತರ ಕನ್ನಡ ಜಿಲ್ಲಾ ಪೆÇಲೀಸರು ಬಂಧಿಸಿದ್ದಾರೆ. ಹೊನ್ನಾವರ ತಾಲೂಕಿನ ಗುಣವಂತೆಯ ನಿವಾಸಿ ನೇತ್ರಾವತಿ ಗೌಡಾ ಎನ್ನುವವರಿಗೆ ಅಮೆರಿಕಾದಲ್ಲಿ ಉದ್ಯೋಗ ನೀಡುವುದಾಗಿ ಇಮೇಲ್ ಕಳುಹಿಸಿ ನಂಬಿಕೆ ಹುಟ್ಟಿಸಿ ಅವರಿಂದ ವಿವಿಧ ಸುಂಕದ ಹೆಸರಿನಲ್ಲಿ ಕರ್ನಾಟಕ, ತ್ರಿಪುರಾ, ಆಸ್ಸಾಂ, ತಮಿಳುನಾಡು, ಮಣಿಪುರ, ಗುಜರಾತ್, ದೆಹಲಿ ರಾಜ್ಯದಲ್ಲಿರುವ ತಮ್ಮ ಒಟ್ಟು 17 ಬ್ಯಾಂಕ್ ಖಾತೆಗಳಿಗೆ ಒಟ್ಟು ರೂ.57,14,749ನ್ನು ವಂಚಕರು ವರ್ಗಾವಣೆ ಮಾಡಿಸಿಕೊಂಡಿದ್ದರು. ಆದರೆ ಕೆಲ ಸಮಯದ ಬಳಿಕ ಇದು ವಂಚನೆ ಎಂದು ತಿಳಿದು ನೇತ್ರಾವತಿ ಜಿಲ್ಲಾ ಸೈಬರ್ ಕ್ರೈಂ ಠಾಣೆಗೆ ಫೆ.10 ರಂದು ದೂರು ನೀಡಿದ್ದರು.ಈ ಬಗ್ಗೆ ದೂರು ದಾಖಲಿಸಿಕೊಂಡ ಸಿಇಎನ್ ಅಪರಾಧ ಠಾಣೆಯ ಇನ್‍ಸ್ಪೆಕ್ಟರ್ ಸೀತಾರಾಮ ಪಿ. ಹಾಗೂ ಅವರ ಸಿಬ್ಬಂದಿಗಳು ತಕ್ಷಣ ಪ್ರಕರಣದ ತನಿಖೆಯನ್ನು ಮುಂದುವರೆಸಿ ಕೋಲಾರ ಮೂಲದ ಅಶೋಕ ಎಂ.ಎನ್, ಅಸ್ಸಾಂ ಮೂಲದ ಬುಲ್ಲಿಯಂಗಿರ್ ಹಲಾಮ್, ತ್ರಿಪುರ ಮೂಲದ ದರ್ತಿನ್ಬೀರ್ ಹಲಾಮ್, ಮಣಿಪುರ ಮೂಲದ ವೊರಿಂಗಮ್ ಫುಂಗ್ಶೋಕ್ ಎನ್ನುವವರನ್ನು ಬಂಧಿಸಿದ್ದಾರೆ. ಇವರೆಲ್ಲ ಬೆಂಗಳೂರಿನಲ್ಲಿ ನೆಲೆಸಿದ್ದರು. ಆರೋಪಿತರು ಹಣ ವರ್ಗಾವಣೆ ಮಾಡಿಸಿಕೊಂಡ ಎಲ್ಲಾ ಬ್ಯಾಂಕ್ ಖಾತೆಗಳಿಂದ 2,61,528 ರೂ.ಗಳನ್ನು ಪ್ರೀಜ್ ಮಾಡಿಸಿದ್ದು, ಸದರಿ ಬ್ಯಾಂಕ್ ಖಾತೆದಾರರ ಮಾಹಿತಿಯನ್ನು ಪಡೆದುಕೊಂಡು ತಾಂತ್ರಿಕವಾಗಿ ವಿಶ್ಲೇಷಣೆ ಮಾಡಿ, ಆರೋಪಿತರ ಪತ್ತೆಗಾಗಿ ತಂಡವನ್ನು ರಚಿಸಿಕೊಂಡು ಫೆ.28ರಂದು ಬೆಂಗಳೂರಿಗೆ ತೆರಳಿ ಆರೋಪಿತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತರಿಂದ 24,000 ನಗದು, ಒಂದು ಸ್ವೈಪ್ ಮಶೀನ್, ಬಯೋಮೆಟ್ರಿಕ್ ಫಿಂಗರ್ ಪ್ರಿಂಟ್ ಥಂಬ್ ಮಶೀನ್, 24 ಬ್ಯಾಂಕ್ ಖಾತೆ, 24 ಎಟಿಎಮ್ ಕಾರ್ಡ್, 24 ಚೆಕ್ ಬುಕ್, 2 ಲ್ಯಾಪ್‍ಟಾಪ್, 23 ಮೊಬೈಲ್, 17 ಸಿಮ್, 1 ಟ್ಯಾಬ್, 2 ಪೆನ್‍ಡ್ರೈವ್, ಒಂದು ಡೊಂಗಲ್, ಒಂದು ವೈಫೈ ರೂಟರ್ ಮಶೀನ್ ಜಪ್ತಿಪಡಿಸಿಕೊಳ್ಳಲಾಗಿದೆ.ಆರೋಪಿತರ ಪತ್ತೆ ಕಾರ್ಯದಲ್ಲಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಹಾಗೂ ಹೆಚ್ಚುವರಿ ಪೆÇಲೀಸ್ ವರಿಷ್ಠಾಧಿಕಾರಿ ಎಸ್.ಬದರಿನಾಥ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ಸಿ.ಇ.ಎನ್ ಆಪರಾಧ ಮೋಲೀಸ್ ಠಾಣಾ ನಿರೀಕ್ಷಕ ಸೀತಾರಾಮ, ಸಿಬ್ಬಂದಿಗಳಾದ ಉಮೇಶ ನಾಯ್ಕ, ಸುದರ್ಶನ ನಾಯ್ಕ, ನಾಗರಾಜ ನಾಯ್ಕ, ಮಂಜುನಾಥ ಹೆಗಡೆ, ಹನುಮಂತ ಕಬಾಡಿ, ನಾರಾಯಣ ಎಮ್.ಎಸ್, ಚಂದ್ರಶೇಖ ಪಾಟೀಲ್, ಸುರೇಶ ನಾಯ್ಕ, ಸಂದೀಪ್ ನಾಯ್ಕ, ಶಿವಾನಂದ ತಾನಸಿ, ಭರತೇಶ ಸದಲಗಿ ಹಾಗೂ ಜಿಲ್ಲಾ ಪೊಲೀಸ್ ಕಚೇರಿಯ ಸಿಬ್ಬಂದಿ ಸುಧೀರ ಮಡಿವಾಳ, ರಮೇಶ ನಾಯ್ಕ ಅವರು ಪಾಲ್ಗೊಂಡಿದ್ದರು.


ಸುದ್ದಿ ಓದಿ