ಪಿಯುಸಿ ವಿದ್ಯಾರ್ಥಿಗಳಿಗೆ ಆಹ್ವಾನ ಶಾಲೆಗಳಿಗೆ ಭೇಟಿ
ಯಲಬುರ್ಗಾ 25: ಪಟ್ಟಣದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಪ್ರಸಕ್ತ 2022-23 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗಗಳಿಗೆ ದಾಖಲಾತಿ ಮಾಡುವಂತೆ ಒತ್ತಾಯಿಸಿ ತಾಲೂಕಿನ ಗೆದಗೇರಿ ಸರಕಾರಿ ಪ್ರೌಢ ಶಾಲೆಗೆ ತೆರಳಿ ಅಲ್ಲಿಯ ಮುಖ್ಯ ಗುರುಗಳಾದ ನಾಗಭೂಷಣ ಚಿನವಾಲರ ರವರಿಗೆ ಮನವಿ ಸಲ್ಲಿಸಿ ಮಾತನಾಡಿದ ಯಲಬುರ್ಗಾ ಪಟ್ಟಣದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶೇಖಬಾಬು ಶಿವಪೂರ ರವರು ಮಾತನಾಡಿದ ಅವರು ಮುಖ್ಯವಾಗಿ ನಮ್ಮ ಕಾಲೇಜು ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪ್ರಾಮಾಣಿಕವಾಗಿ ನಮ್ಮ ಸಿಬ್ಬಂದಿಯವರು ಪ್ರಯತ್ನಿಸುತ್ತಿದ್ದು, ಇದಕ್ಕೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿಯರು ಹೆಚ್ಚಿನ ರೀತಿಯಲ್ಲಿ ನಮ್ಮ ಕಾಲೇಜಿಗೆ ಪ್ರವೇಶ ಪಡೆಯಬೇಕೆಂದರು. ನಂತರ ಮಾತನಾಡಿದ ಪ್ರೌಢ ಶಾಲೆಯ ಮುಖ್ಯಗುರುಗಳಾದ ನಾಗಭೂಷಣ ಚಿನವಾಲರ ರವರು ನಮ್ಮ ಶಾಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿನಿಯರನ್ನು ಯಲಬುರ್ಗಾ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ವಿದ್ಯಾರ್ಥಿನಿಯರನ್ನು ಕಳುಹಿಸಲು ಪ್ರಯತ್ನಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಶಿಕ್ಷಕರಾದ ಹನಮಂತಪ್ಪ ವಗ್ಗಾನವರ, ಶಿವಶಂಕರಯ್ಯ ಹಿರೇಮಠ, ದೇವಪ್ಪ ಮುಗಳಿ, ಸಂಗಪ್ಪ ಸಂಗನಾಳ, ಗಣಪತಿ ರಾಠೋಡ ಬಸವರಾಜ ಇನ್ನಿತರರು ಉಪಸ್ಥಿತರಿದ್ದರು.