ವಿಕ್ಟೋರಿಯಾ ಆಸ್ಪತ್ರೆಗೆ 50 ಉಚಿತ ಪರೀಕ್ಷಾ ಕಿಟ್ ವಿತರಿಸಿದ ಈಶ್ವರ್ ಖಂಡ್ರೆ
ಬೆಂಗಳೂರು, ಏ.7, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಅದರ ನಿಮೂರ್ಲನೆಗೆ ಹಗಲಿರುಳು ಶ್ರಮಿಸುತ್ತಿರುವ ವೈದ್ಯರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಯವರಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ 1 ಲಕ್ಷ ರೂ ಮೌಲ್ಯದ ಪಿಪಿಟಿ ಕಿಟ್ ವಿತರಣೆ ಮಾಡಿದ್ದಾರೆ.ಕೋವಿಡ್- 19 ಚಿಕಿತ್ಸೆ ನೀಡುವ ವೈದ್ಯರಿಗೆ ಅವಶ್ಯವಾಗಿರುವ ಸರಿಸುಮಾರು 50 ಕಿಟ್ ಗಳನ್ನು ಖಂಡ್ರೆ ಅವರು ನೀಡಿದ್ದಾರೆ. ನಂತರ ಮಾತನಾಡಿದ ಅವರು, ಕೋವಿಡ್-19 ಯುದ್ಧದಲ್ಲಿ ವೈದ್ಯರ ಸುರಕ್ಷತೆ ಅತಿ ಮುಖ್ಯವಾದುದು. ವೈದ್ಯರು, ವೈದ್ಯಕೀಯ ಸಿಬ್ಬಂದಿ ಸುರಕ್ಷಿತವಾಗಿದ್ದರೇ ಮಾತ್ರ ಕೋವಿಡ್ ವಿರುದ್ಧದ ಸಮರದಲ್ಲಿ ಜಯ ಸಾಧಿಸಲು ಸಾಧ್ಯ ಎಂದರು.ಈಗಾಗಲೇ ಕೆಪಿಸಿಸಿ ವತಿಯಿಂದ ಕೋವಿಡ್-19 ನಿರ್ವಹಣೆ ಹಾಗೂ ಜನಸಾಮಾನ್ಯರ ಸಹಾಯಕ್ಕಾಗಿ ಸಹಾಯವಾಣಿ ಆರಂಭಿಸಲಾಗಿದೆ ಎಂದರು.ಖಂಡ್ರೆ ಅವರ ಕಾರ್ಯಕ್ಕೆ ವಿಕ್ಟೋರಿಯಾ ಆಸ್ಪತ್ರೆ ಮೆಡಿಕಲ್ ಸೂಪರಿಡೆಂಟ್ ಡಾಕ್ಟರ್ ಗೀತಾ ಶಿವಮೂರ್ತಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಈ ಸಂದರ್ಭದಲ್ಲಿ ಕೆಪಿಸಿಸಿ ವೈದ್ಯರ ಘಟಕದ ಸದಸ್ಯರು ಹಾಗೂ ಬೆಂಗಳೂರಿನ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 