ವಿದ್ಯಾರ್ಥಿ ವೇತನಕ್ಕೆ ಆಯ್ಕೆ
ರಾಣೇಬೆನ್ನೂರ 12: 2020-21ನೇ ಸಾಲಿನ ರಾಷ್ಟ್ರೀಯ ಪ್ರತಿಭಾನ್ವಿತ ವಿದ್ಯಾರ್ಥಿ ವೇತನ ಎನ್‌ಎಂಎಂಎಸ್ ಪರೀಕ್ಷೆಯಲ್ಲಿ ತಾಲೂಕಿನ ಚೌಡಯ್ಯದಾನಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿ ಈಶ್ವರ ಗೋಣೆಪ್ಪ ದೀಪಾವಳಿ ಆಯ್ಕೆಯಾಗಿರುತ್ತಾನೆ. ವಿದ್ಯಾರ್ಥಿಯ ಸಾಧನೆಗೆ ಶಾಲೆಯ ಪ್ರಧಾನ ಗುರುಗಳು ಮತ್ತು ಸಹ ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಗ್ರಾಮದ ಗಣ್ಯರು ಅಭಿನಂದಿಸಿದ್ದಾರೆ.