ಇಸ್ಲಾಂ ಧರ್ಮ ಶಾಂತಿ, ಕರುಣೆ ಹಾಗೂ ಮಾನವೀಯ ಮೌಲ್ಯಗಳನ್ನು ಸಾರುತ್ತದೆ : ಕರಡಿ ವಲಿಸಾಬ್
Islam preaches peace, compassion and human values: Karadi Valisaab
ಲೋಕದರ್ಶನ ವರದಿ
ಕಂಪ್ಲಿ 30 : ತ್ಯಾಗ, ಬಲಿದಾನ ಹಾಗೂ ಭ್ರಾತೃತ್ವದ ಸಂಕೇತವಾದ ಈದುಲ್ ಅಝಾಹ್(ಬಕ್ರೀದ್) ಹಬ್ಬವನ್ನು ಬಳ್ಳಾರಿ ನಗರದ ಬೆಂಗಳೂರು ರಸ್ತೆಯ ಗುಗ್ಗರಹಟ್ಟಿ ಬಳಿಯ ಕೆಇಬಿ ಎದುರುಗಡೆಯ ಮಹಮ್ಮದೀಯ ರಜಾಕ್ ಮಸೀದಿಯಲ್ಲಿ ಶ್ರದ್ದಾಭಕ್ತಿಯಿಂದ ಆಚರಿಸಲಾಯಿತು. ಧರ್ಮಗುರು ಮತ್ತು ಮಸೀದಿ ಕಮಿಟಿ ಅಧ್ಯಕ್ಷ ಹಾಜಿ ರೋಷನ್ ಜಮೀರ್ ನೂರ್ ಇವರು ಸಂದೇಶ ಮತ್ತು ಪ್ರವಚನ ನೀಡಿ ಮಾತನಾಡಿ, ಸಾಮರಸ್ಯ ಹಾಗೂ ಸಮಾನತೆಯ ಸಂಕೇತವಾಗಿ ಬಕ್ರೀದ್ ಆಚರಿಸಲಾಗುತ್ತದೆ. ಬಲಿದಾನ ಹಾಗೂ ತ್ಯಾಗದ ಮಹತ್ವವನ್ನು ಬಕ್ರೀದ್ ಹೊಂದಿದೆ ಎಂದರು.
ಮುಸ್ಲಿಂ ಸಮಾಜದ ಹಿರಿಯ ಮುಖಂಡ ಕರಡಿ ವಲಿಸಾಬ್ ಮಾತನಾಡಿ, ಸಮಾಜದಲ್ಲಿ ಪರಸ್ಪರ ಪ್ರೀತಿ, ಸಹೋದರತ್ವ ಮತ್ತು ಸೌಹಾರ್ದ ಬೆಳೆಸಿಕೊಳ್ಳುವ ಅಗತ್ಯವಿದೆ. ಇಸ್ಲಾಂ ಧರ್ಮ ಶಾಂತಿ, ಕರುಣೆ ಹಾಗೂ ಮಾನವೀಯ ಮೌಲ್ಯಗಳನ್ನು ಸಾರುತ್ತದೆ. ಎಲ್ಲ ಸಮುದಾಯದ ಜನರು ಪರಸ್ಪರ ಗೌರವ, ಸಹಕಾರ ಮತ್ತು ಸೌಹಾರ್ದದಿಂದ ಬದುಕುವ ಮೂಲಕ ಸಮಾಜದ ಅಭಿವೃದ್ಧಿಗೆ ಕೈಜೋಡಿಸೋಣ ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ಅಬ್ದುಲ್ ರಸೂಲ್, ಮುಕ್ತಿಯಾರ್, ಕರಡಿವಲಿಸಾಬ್, ಸೈಯದ್ ಮೆಹಬೂಬ್, ಸೈಯದ್ ನೂರಿ ಸೇರಿದಂತೆ ಮುಸ್ಲಿಂ ಬಾಂಧವರು ಪಾಲ್ಗೊಂಡಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 