ಅಂತರರಾಷ್ಟ್ರೀಯ

ಗಾಜಾ ಪಟ್ಟಿಯಲ್ಲಿ ಇಸ್ರೇಲ್‌ ಕಾರ್ಯಾಚರಣೆ ತಕ್ಷಣ ನಿಲ್ಲಿಸಬೇಕು: ಸೌದಿ ಮನವಿ

ಗಾಜಾ ಪಟ್ಟಿಯಲ್ಲಿ ಇಸ್ರೇಲ್‌ ಕಾರ್ಯಾಚರಣೆ ತಕ್ಷಣ ನಿಲ್ಲಿಸಬೇಕು: ಸೌದಿ ಮನವಿ

ರಿಯಾದ್ 20: ಇಸ್ರೇಲ್ ಮತ್ತು ಹಮಾಸ್ ಬಂಡುಕೋರರ ನಡುವಿನ ಸಂಘರ್ಷ ಕುರಿತು ಸೌದಿ ಅರೇಬಿಯಾ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ಇಂದು (ಶುಕ್ರವಾರ) ಪ್ರತಿಕ್ರಿಯಿಸಿದ್ದಾರೆ.

ಗಲ್ಫ್ ಸಹಕಾರ ಮಂಡಳಿಯ ಸದಸ್ಯ ರಾಷ್ಟ್ರಗಳ ನಾಯಕರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಗಾಜಾ ಪಟ್ಟಿಯಲ್ಲಿ ಇಸ್ರೇಲ್‌ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆ ತಕ್ಷಣ ನಿಲ್ಲಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ಇಸ್ರೇಲ್ ಮತ್ತು ಹಮಾಸ್ ಬಂಡುಕೋರರ ನಡುವಿನ ಸಂಘರ್ಷ ಕುರಿತು ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಸೌದಿ ಅರೇಬಿಯಾ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ಅವರು ಈಚೆಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದರು.

ಸಂಘರ್ಷ ನಿಲ್ಲಿಸುವ ಕುರಿತು ರಿಯಾದ್‌ ಎಲ್ಲಾ ಅಂತರರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳೊಂದಿಗೆ ಸಂವಹನ ನಡೆಸುತ್ತಿದೆ ಎಂದು ಮೊಹಮ್ಮದ್‌ ಅವರು ರೈಸಿಗೆ ತಿಳಿಸಿದರು ಎಂದು ಸೌದಿ ಪ್ರೆಸ್‌ ಏಜೆನ್ಸಿ (ಎಸ್‌ಪಿಎ) ಅಧಿಕಾರಿ ಹೇಳಿದ್ದರು.

ಸುದ್ದಿ ಓದಿ