ಅಂತರರಾಷ್ಟ್ರೀಯ

ಇಸ್ರೇಲ್: ನೂತನ ಪ್ರಧಾನಿಯಾಗಿ ನೆಫ್ತಾಲಿ

ಇಸ್ರೇಲ್: ನೂತನ ಪ್ರಧಾನಿಯಾಗಿ ನೆಫ್ತಾಲಿ

ಟೆಲ್ ಅವಿವ್, ಜೂನ್ 14: ಇಸ್ರೇಲ್‌ನಲ್ಲಿ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರ ಹನ್ನೆರಡು ವರ್ಷಗಳ ಆಡಳಿತ ಅಂತ್ಯಗೊಂಡಿದ್ದು,  ರಾಷ್ಟ್ರೀಯವಾದಿ ನೆಫ್ತಾಲಿ ಬೆನೆಟ್ ಸಮ್ಮಿಶ್ರ ಸರ್ಕಾರದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.

ಅತ್ಯಲ್ಪ ಬಹುಮತ 60-59 ರಿಂದ ಸರ್ಕಾರ ರಚನೆ ಮಾಡಲಾಗಿದ್ದು, ಅಧಿಕಾರ ಹಂಚಿಕೆಯ ಸೂತ್ರದ ಭಾಗವಾಗಿ 2023 ರ ಸೆಪ್ಟೆಂಬರ್ ತಿಂಗಳವರೆಗೂ ನಫ್ತಾಲಿ ಬೆನೆಟ್ ಅವರು ಪ್ರಧಾನಿಯಾಗಿ ಕಾರ್ಯನಿರ್ವಹಣೆ ಮಾಡಲಿದ್ದಾರೆ.

ಇಸ್ರೇಲ್‌ನ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಡಪಂಥೀಯ ಅರಬ್ ಯೇತರ ಪಕ್ಷಗಳು, ಸ್ವತಂತ್ರ ಅರಬ್ ಪಕ್ಷ ರಾಮ್ ರಾಷ್ಟ್ರೀಯವಾದಿ ನೆಫ್ತಾಲಿ ಬೆನ್ನೆಟ್ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡಿದ್ದು, ಅನೂಹ್ಯವಾದ ರೀತಿಯಲ್ಲಿ ಸೈದ್ಧಾಂತಿಕ ಭಿನ್ನಾಭಿಪ್ರಾಗಳನ್ನು ಹೊಂದಿರುವ ಪಕ್ಷಗಳೇ ಸರ್ಕಾರ ರಚಿಸಿರುವುದು ಅಚ್ಚರಿ ಮೂಡಿಸಿದೆ. 

ನೇತನ್ಯಾಹು ದೀರ್ಘಾವಧಿ ಸೇವೆ ಸಲ್ಲಿಸಿದ ಇಸ್ರೆಲ್‌ನ ಪ್ರಧಾನಿಯಾಗಿದ್ದು, ಲಿಕುಡ್ ಪಕ್ಷದ ಮುಖ್ಯಸ್ಥರಾಗಿ, ವಿಪಕ್ಷ ನಾಯಕರಾಗಿ ಮುಂದುವರೆಯಲಿದ್ದಾರೆ.

ಯಾವುದೇ ಇಸ್ರೇಲಿ ಪ್ರಜೆಯನ್ನೂ ಸಹ ಬಿಟ್ಟುಕೊಡಲು ತಮ್ಮ ಸಮಿಶ್ರ ಸರ್ಕಾರ ಒಪ್ಪುವುದಿಲ್ಲ ಎಂದು ಬಹು ಕೋಟ್ಯಧಿಪತಿಯೂ ಆಗಿರುವ ನಫ್ತಾಲಿ ಬೆನೆಟ್ ತಿಳಿಸಿದ್ದಾರೆ.

ಸುದ್ದಿ ಓದಿ