ಇಂಡಿ

ಮಕ್ಕಳಿಗೆ ಮಾತೃ ಭಾಷೆಯಲ್ಲಿಯೇ ಶಿಕ್ಷಣ ನೀಡುವುದು ಅತ್ಯಗತ್ಯ: ಬಗಲಿ

ಮಕ್ಕಳಿಗೆ ಮಾತೃ ಭಾಷೆಯಲ್ಲಿಯೇ ಶಿಕ್ಷಣ ನೀಡುವುದು ಅತ್ಯಗತ್ಯ: ಬಗಲಿ

ಇಂಡಿ: ಮಕ್ಕಳಿಗೆ ಬೋಧನೆ ಪರಿಣಾಮಕಾರಿಯಾಗಬೇಕೆಂದರೆ ಮಾತೃ ಭಾಷೆಯಲ್ಲಿಯೇ ಶಿಕ್ಷಣ ನೀಡುವುದು ಅತ್ಯಗತ್ಯವಾಗಿದೆ ಎಂದು ಶಾಂತೇಶ್ವರ ವಿದ್ಯಾವರ್ಧಕ ಸಂಘದ ಗೌರವ ಕಾರ್ಯದರ್ಶಿ ಪ್ರಭಾಕರ ಬಗಲಿ ಅಭಿಪ್ರಾಯಪಟ್ಟರು. 

ಶುಕ್ರವಾರ ಪಟ್ಟಣದ ಶಾಂತೇಶ್ವರ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಬರುವ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಕಾಲೇಜು ಹಾಗೂ ಐಟಿಐ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶನದಂತೆ ಕೋಟಿ ಕಂಠ ಗಾಯನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. 

ನಮ್ಮ ಮಾತೃ ಭಾಷೆ ಕನ್ನಡವೇ ಸತ್ಯ ಕನ್ನಡವೇ ನಿತ್ಯ. ಮಾತೃಭಾಷೆಯನ್ನೇ ಹೆಚ್ಚಾಗಿ ಬಳಸಿ ನಾಡು-ನುಡಿ ಉಳಿವಿಗೆ ನಾವೆಲರೂ ಬಧ್ಧರಾಗಬೇಕು ಎಂದರು. 

ವೇದಿಕೆಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ನೀಲಕಂಠಗೌಡ ಪಾಟೀಲ, ಪ್ರಾಚಾರ್ಯ ಬಿ.ಎನ್‌. ರಾಠೋಡ, ಎ.ಬಿ. ಪಾಟೀಲ, ರಾಘವೇಂದ್ರ ಕುಲಕರ್ಣಿ, ಎ.ಪಿ. ಬಿರೇಡ ಸೇರಿದಂತೆ ಉಪಸ್ಥಿತರಿದ್ದರು.  

ಶಾಲಾ ಶಿಕ್ಷಕ, ಶಿಕ್ಷಕಿಯರು, ಶಾಲಾ, ಕಾಲೇಜಿನ ಸಾವಿರಾರು ವಿದ್ಯಾರ್ಥಿ/ನಿಯರು ಕನ್ನಡ ನಾಡು-ನುಡಿ ಉದ್ದಿಪನಗೊಳಿಸುವ ಗೀತೆಗಳನ್ನು ಹಾಡಿ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.  


ಸುದ್ದಿ ಓದಿ