ಕಾರವಾರ

ಸಂಕಷ್ಟಕ್ಕೊಳಗಾದ ಜನರ ನೆರವಿಗೆ ಬರುವುದು ಪ್ರತಿಯೊಬ್ಬರ ಕರ್ತವ್ಯ: ಸಚಿವ ಹೆಬ್ಬಾರ

ಸಂಕಷ್ಟಕ್ಕೊಳಗಾದ ಜನರ ನೆರವಿಗೆ ಬರುವುದು ಪ್ರತಿಯೊಬ್ಬರ ಕರ್ತವ್ಯ: ಸಚಿವ ಹೆಬ್ಬಾರ

ಮುಂಡಗೋಡ 04: ಕೋವಿಡ್‌ನಿಂದಾಗಿ ಕಳೆದ 2 ವರ್ಷಗಳಿಂದ ಜನ ತೀವ್ರ ಅನ್ಯಾಯಕ್ಕೊಳಗಾಗಿದ್ದು, ಬಡವರು ಹಾಗೂ ಮಧ್ಯಮ ವರ್ಗದವರು ತೊಂದರೆ ಅನುಭವಿಸುವಂತಾಗಿದೆ. ಸಾಕಷ್ಟು ಜನ ಉದ್ಯೋಗ ಕಳೆದುಕೊಂಡು ಸಂಕಷ್ಟಕ್ಕೊಳಗಾಗಿದ್ದಾರೆ. ಈ ಸಂದರ್ಭದಲ್ಲಿ ಸಂಕಷ್ಟಕ್ಕೊಳಗಾದವರ ನೆರವಿಗೆ ಬರುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದರು.  

ಶನಿವಾರ ಸಂಜೆ ತಾಲೂಕಿನ ಮೈನಳ್ಳಿ ಗ್ರಾಮದಲ್ಲಿ ಶಿವರಾಮ ಹೆಬ್ಬಾರ ಕುಟುಂಭದ ವತಿಯಿಂದ ಕ್ಷೇತ್ರದ 63 ಸಾವಿರ ಬಿ.ಪಿ.ಎಲ್ ಕುಟುಂಬಗಳಿಗೆ ಫುಡ್ ಕಿಟ್ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕಳೆದ ಬಾರಿಯಂತೆ ಈ ಬಾರಿಯು 63 ಸಾವಿರ ಕುಟುಂಬಗಳಿಗೆ ಪುಡ್ ಕಿಟ್ ಗಳನ್ನು ವಿತರಿಸಲಾಗುತ್ತಿದೆ. ಜನರ ರುಣ ತೀರಿಸುವ ನಿಟ್ಟಿನಲ್ಲಿ ಕಿಂಚಿತ್ತು ಅಳಿಲು ಸೇವೆ ಮಾಡುತ್ತಿದ್ದೇನೆ. ಪ್ರತಿಯೊಬ್ಬರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.  

ಉತ್ತರಕನ್ನಡ ಜಿಲ್ಲೆಯಲ್ಲಿಯೇ ಸುಮಾರು 500 ಕ್ಕೂ ಅಧಿಕ ಜನರನ್ನು ಕಳೆದುಕೊಂಡಿದ್ದೇವೆ. ಒಂದನೇ ಅಲೆಯಲ್ಲಿ ಹಿರಿಯರು 2ನೇ ಅಲೆಯಲ್ಲಿ ಮಧ್ಯಮ ವಯಸ್ಕರರನ್ನು ಕಳೆದುಕೊಂಡು ನೋವಿನಲ್ಲಿ ಕಾಲ ಕಳೆಯುತ್ತಿರುವ ಈ ಸಂದರ್ಭದಲ್ಲಿ ಮೂರನೇ ಅಲೆ ಬರಲಿದೆ ಎಂಬ ಆತಂಕ ಜನರಲ್ಲಿ ಮನೆ ಮಾಡಿದೆ. ಮಕ್ಕಳ ಆರೋಗ್ಯ ದೃಷ್ಟಿಯಿಂದ ಮಕ್ಕಳ ತಜ್ಞ ವೈದ್ಯರೊಂದಿಗೆ ಆಸ್ಪತ್ರೆಗಳಲ್ಲಿ ಅಗತ್ಯ ವ್ಯವಸ್ಥೆ ಮಾಡಲಾಗಿದೆ.  

ದೇಶದ ಜನ ಹಸಿವಿನಿಂದ ನರಳಾಡಬಾರದೆಂಬ ಉದ್ದೇಶದಿಂದ ರಾಜ್ಯದ ಮುಖ್ಯಮಂತ್ರಿ ಯಡಿಯೂರ​‍್ಪ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಕಾರದಿಂದ ದೀಪಾವಳಿವರೆಗೆ ಉಚಿತವಾಗಿ 10 ಕೆ.ಜಿ ಅಕ್ಕಿ ವಿತರಿಸುವ ಕಾರ್ಯಕ್ರಮ ಜಾರಿ ಮಾಡಿದೆ. 

ಶೀಗ್ರದಲ್ಲಿ ಭೂಮಿ ಕೆಜೆಪಿ ಸಮಸ್ಯೆ ಪರಿಹಾರ: ಮೈನಳ್ಳಿ, ಕೋಡಂಬಿ ಸೇರಿದಂತೆ ತಾಲೂಕಿನಲ್ಲಿ ಕಳೆದ 4 ದಶಕಗಳಿಂದ ಕೆಜೆಪಿ ಸಮಸ್ಯೆ ಇದ್ದು, ತಾವು ವಾಸವಿರುವ ಮನೆ ಹಾಗೂ ಗದ್ದೆ ತಮ್ಮದು ಎಂದು ಹೇಳಿಕೊಳ್ಳಲು ದಾಖಲೆಗಳಿಲ್ಲದಂತಾಗಿರುವುದರಿಂದ ಸಾಲ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಅದನ್ನು ತ್ವರಿತಗತಿಯಲ್ಲಿ ಪರಿಹರಿಸುವ ಕ್ರಮ ಕೈಗೊಳ್ಳಲಾಗಿದ್ದು, ಕೆಲವೇ ತಿಂಗಳಲ್ಲಿ ಇದಕ್ಕೆ ಪರಿಹಾರ ಸಿಗಲಿದ್ದು, ಜನರ ಸಂಕಷ್ಟ ದೂರವಾಗಲಿದೆ ಎಂದು ಸಚಿವ ಶಿವರಾಮ ಹೆಬ್ಬಾರ ಹೇಳಿದರು. 

ಜಿ.ಪಂ ಸದಸ್ಯ ಎಲ್‌.ಟಿ.ಪಾಟೀಲ, ರವಿಗೌಡ ಪಾಟೀಲ, ವಿವೇಕ ಹೆಬ್ಬಾರ, ಉಮೇಶ ಬಿಜಾಪುರ, ನಾಗಭೂಷಣ ಹಾವಣಗಿ, ಗಣೇಶ ಶಿರಾಲಿ, ತುಕಾರಾಮ ಇಂಗಳೆ, ದೇವು ಜಾನು ಪಾಟೀಲ ಮುಂತಾದವರು ಉಪಸ್ಥಿತರಿದದ್ದರು. 


ಸುದ್ದಿ ಓದಿ