ವಾರಿಯಸರ್್ಗಳಿಗೆ ಪ್ರೋತ್ಸಾಹ ನೀಡುವುದು ಪ್ರತಿಯೊಬ್ಬರ ಕರ್ತವ್ಯ
ಬೈಲಹೊಂಗಲ 01: ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಪ್ರಂಟ್ ಲೈನ್ ವಾರಿಯಸರ್್ಗಳಿಗೆ ಪ್ರೋತ್ಸಾಹ ನೀಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಪತ್ರಕರ್ತರು ಪ್ರಾಣದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಬೆಳಗಾವಿ ಕಾಡಾ ಅಧ್ಯಕ್ಷ, ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಹೇಳಿದರು.
ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಆವರಣದಲ್ಲಿ ಪತ್ರಕರ್ತರಿಗೆ ಎನ್-95 ಮಾಸ್ಕ್ ಹಾಗೂ ಪೇಸ್ ಶೀಲ್ಡ್ ವಿತರಿಸಿ ಅವರು ಮಾತನಾಡಿ, ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆಯನ್ನು ತಡೆಗಟ್ಟಲು ಸರಕಾರ, ವೈದ್ಯರು, ನಾನಾ ಇಲಾಖೆಗಳ ಅಧಿಕಾರಿಗಳು, ಪತ್ರಕರ್ತರು ಮುಂಚೂಣಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಮಾಧ್ಯಮದವರು ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಮಾಧ್ಯಮದವರು ಸಮಾಜದ ಅಂಕು-ಡೊಂಕುಗಳನ್ನು ತಿದ್ದುವದರ ಜತೆಗೆ ಕೊರೊನಾದಲ್ಲಿ ಮುಂಚೂಣಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಾಡಿನಲ್ಲಿ ಪ್ರಾಮಾಣಿಕ ಪತ್ರಕರ್ತರಿದ್ದು, ಉತ್ತಮ ಕಾರ್ಯ ಮಾಡುತ್ತಿದ್ದಾರೆ. ಪತ್ರಕರ್ತರ ಕಷ್ಟಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವೆ ಎಂದರು.
ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಈಶ್ವರ ಹೋಟಿ, ಪತ್ರಕರ್ತರ ಸಂಘದ ಅಧ್ಯಕ್ಷ ಮಹಾಂತೇಶ ತುರಮರಿ, ಪತ್ರಕರ್ತರಾದ ವಿರುಪಾಕ್ಷ ವಾಲಿ, ಉದಯ ಕೊಳೇಕರ, ಬಸವರಾಜ ಕಲಾದಗಿ, ಕುಮಾರ ರೇಶ್ಮಿ, ಮಹಾಂತೇಶ ರಾಜಗೋಳಿ, ಮಹಾಂತೇಶ ರೇಶ್ಮಿ, ರವಿ ಹುಲಕುಂದ, ರವಿಕಿರಣ ಯಾತಗೇರಿ, ರಾಜು ಬಡಿಗೇರ, ಪ್ರಕಾಶ ಬೆಳಗಾವಿ, ಯುನೂಸ್ ಬಡೇಘರ, ಮಂಜುನಾಥ ಜ್ಯೋತಿ, ನಾಗವೇಣಿ ಹೂಲಿಕೇರಿ, ಈಶ್ವರ ಶಿಲ್ಲೇದಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಬೈಲಹೊಂಗಲ ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಆವರಣದಲ್ಲಿ ಪತ್ರಕರ್ತರಿಗೆ ಎನ್-95 ಮಾಸ್ಕ್ ಹಾಗೂ ಗುಣಮಟ್ಟದ ಪೇಸ್ ಶೀಲ್ಡ್ನ್ನು ಕಾಡಾ ಅಧ್ಯಕ್ಷ, ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ವಿತರಿಸಿದರು