‘ಪುನರ್ಜನ್ಮ ನೀಡುವ ವೈದ್ಯರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯ’
ಮಾಂಜರಿ 01: ವೈದ್ಯೋ ನಾರಾಯಣ ಹರಿ ಎಂದು ವೈದ್ಯರನ್ನು ದೇವರಿಗೆ ಹೋಲಿಸಲಾಗುತ್ತದೆ. ರೋಗಕ್ಕೆ ತುತ್ತಾದ ಪ್ರತಿಯೊಬ್ಬರನ್ನು ಸರಿಯಾದ ಚಿಕಿತ್ಸೆ ನೀಡುವ ಮೂಲಕ ಗುಣಪಡಿಸಿ, ಅವನಿಗೆ ಪುನರ್ಜನ್ಮ ನೀಡುವುದು ವೈದ್ಯರ ಕಾಯಕವಾದರೆ, ಅವರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹಾಗಾಗಿ ವೈದ್ಯರಿಗೆ ವಿಶೇಷ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಜುಲೈ 1ರಂದು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಗುತ್ತದೆ ಎಂದು ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿರುವ ಕೆಎಲ್ಇ ಶಿಕ್ಷಣ ಸಂಸ್ಥೆಯ ಸಂಸ್ಕೃತಿ ಶಾಲೆಯ ಪ್ರಾಚಾರ್ಯರಾದ ಮುಹುವಾ ನಿಯೋಗಿ ಹೇಳಿದರು
ಅವರು ಸೋಮವಾರರಂದು ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿರುವ ಕೆಎಲ್ಇ ಶಿಕ್ಷಣ ಸಂಸ್ಥೆಯ ಸಂಸ್ಕೃತಿ ಶಾಲೆಯಲ್ಲಿ ಆಯೋಜಿಸಲಾದ ರಾಷ್ಟ್ರೀಯ ವೈದ್ಯರ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ರಾಷ್ಟ್ರೀಯ ವೈದ್ಯರ ದಿನದಂದು, ವೈದ್ಯರ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುತ್ತದೆ. ಅಲ್ಲದೇ ನಮ್ಮ ಜೀವನಕ್ಕೆ ವೈದ್ಯರು ನೀಡಿದ ಕೊಡುಗೆಯನ್ನು ಸ್ಮರಿಸಿ ಪ್ರಶಂಸಿಸಲಾಗುತ್ತದೆ. ಹಾಗಾಗಿ ಈ ದಿನ ಅನೇಕ ಕಡೆಗಳಲ್ಲಿ ವೈದ್ಯರನ್ನು ಗೌರವಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಜೊತೆಗೆ ಈ ವಿಶೇಷ ದಿನವನ್ನು ಜನರ ಸೇವೆಗಾಗಿ ಪ್ರಾಣವನ್ನೇ ಪಣಕ್ಕಿಟ್ಟಿರುವ ಆರೋಗ್ಯ ಕಾರ್ಯಕರ್ತರಿಗೆ ಗೌರವ ಸಲ್ಲಿಸಲಾಗುತ್ತದೆ. ನೀವು ಕೂಡ ನಿಮ್ಮ ಬದುಕಿಗೆ ಮತ್ತೆ ಜೀವ ತುಂಬಿದ ವೈದ್ಯರಿಗೆ ಈ ದಿನ ಗೌರವಿಸುವದು ನಮ್ಮ ಆದ್ಯ ಕರ್ತವವಾಗಿದೆ ಎಂದು ಅವರು ಹೇಳಿದರು.
ಶಾಲೆಯ ಪರವಾಗಿ ವೈದ್ಯರಾದ ಮಹಾದೇವ ಸಲಗರೆ, ಸುಜಾತ ಸಲಗರೆ, ಮಹೇಶ್ ಕುಂಬಾರ್, ಪವನ್ ಲಾಲ್ ಸಿಂಗ್, ಜೈಪ್ರಕಾಶ್ ಘೋರಪಾಡೆ, ಸರಿತಾ ಮಗದುಮ್, ಜಿತೇಂದ್ರ ಉಗಾರೆ, ನಂದ ಕಿಶೋರ್ ಪಾಟೀಲ್, ಸಂಪದಾ ಉಗಾರೆ, ಸುಪ್ರಿಯ ಮಗದುಮ ಅವರನ್ನು ರಾಷ್ಟ್ರೀಯ ವೈದ್ಯ ದಿನಾಚರಣೆಯ ಅಂಗವಾಗಿ ಸನ್ಮಾನಿಸಲಾಯಿತು. ಇನ್ನಿತರ ವೈದ್ಯರು ಹಾಜರಿದ್ದರು.
ಅನಿತಾ ಮಡಿವಾಳ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.