ಕಾನೂನು ಅರಿವು ಮತ್ತು ನೆರವು ಪಡೆದುಕೊಳ್ಳುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ; ನ್ಯಾಯಾಧೀಶ ಬಿ.ಸತೀಶ್ ಸಲಹೆ
ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಭಾಷಣ
ಕುಷ್ಟಗಿ. ಅ.10; ಕಾನೂನು ಅರಿವು ಮತ್ತು ನೆರವು ಪಡೆದುಕೊಳ್ಳುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಸತೀಶ್, ಬಿ ಸಲಹೆ ನೀಡಿದರು.
ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂಘ ಹಾಗೂ ಆರೋಗ್ಯ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಮಂಗಳವಾರ ಬೆಳಿಗ್ಗೆ ಇಲ್ಲಿನ ತಾಲೂಕಾ ಆಸ್ಪತ್ರೆಯಲ್ಲಿ ಏರಿ್ಡಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನ್ಯಾಯಾಂಗ ಇಲಾಖೆಯ ಕಾನೂನು ಸೇವಾ ಸಮಿತಿ ವತಿಯಿಂದ ಯಾವುದೇ ರೀತಿಯ ವ್ಯಾಜ್ಯ ಗಳಿಗೆ ಉಚಿತವಾಗಿ ಕಾನೂನು ಅರಿವು ನೆರವು ಮೂಡಿಸುತ್ತಿದೆ ಕಾರಣ ಸಾರ್ವಜನಿಕರು ನಿರ್ಲಕ್ಷ್ಯ ಧೋರಣೆ ಅನುಸರಿಸದೇ ಇದರ ಸದುಪಯೋಗ ಪಡೆದು ಕೊಳ್ಳಬೇಕು ಎಂದು ಸವಹೆ ನೀಡಿದರು.
ತಾಲೂಕಾ ಆರೋಗ್ಯಾಧಿಕಾರಿ ಡಾ.ಆನಂದ ಗೋಟೂರ ಅಧ್ಯಕ್ಷತೆವಹಿಸಿದ್ದರು. ಈ ಸಂದರ್ಭದಲ್ಲಿ ಸರಕಾರಿ ನೌಕರರ ಸಂಘದ ಅಧ್ಯಕ್ಷ ಬಾಲಾಜಿ ಬಳಿಗಾರ, ವಕೀಲರ ಸಂಘದ ಕಾರ್ಯದರ್ಶಿ ಬಸವರಾಜ ಲಿಂಗಸೂರ, ಜಂಟಿ ಕಾರ್ಯದರ್ಶಿ, ಮೈನುದ್ದೀನ್, ಆರ್.ಎಚ್ ಸುಂಕದ ವಕೀಲರು, ಸಹಾಯಕ ಸರಕಾರಿ ಅಭಿಯೋಜಕ ರಾಯನಗೌಡ ಎಲ್, ಐ.ಸಿ.ಟಿ.ಸಿ ಕೌನ್ಸಲರ್ ಚನ್ನಪ್ಪ, ಪ್ರಕಾಶ ಗುತ್ತಿಗೆದಾರರ ಹಾಗೂ ವೈದ್ಯಾಧಿಕಾರಿಗಳು, ರಕ್ತ ಪರೀಕ್ಷಕರು, ಶೂಶ್ರಕರು ಮತ್ತು ಆಶಾ ಕಾರ್ಯಕರ್ತರು ಉಪಸ್ಥಿತರಿದ್ದರು.
ಅತಿಥಿ ಉಪನ್ಯಾಸಕರು ವೈದ್ಯಾಧಿಕಾರಿಗಳು, ತಾಲೂಕಾ ಆಸ್ಪತ್ರೆ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಕೆ.ಎಸ್. ರೆಡ್ಡಿ ಮಾನಸಿಕ ಆರೋಗ್ಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.