ಬಳ್ಳಾರಿ

ಹಿರಿಯರನ್ನು ಪ್ರೀತಿ, ಗೌರವದಿಂದ ನೋಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ: ರಾಜೇಶ್ ಎನ್‌. ಹೊಸಮನಿ

ಹಿರಿಯರನ್ನು ಪ್ರೀತಿ, ಗೌರವದಿಂದ ನೋಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ: ರಾಜೇಶ್ ಎನ್‌. ಹೊಸಮನಿ

ಲೋಕದರ್ಶನ ವರದಿ  

ಬಳ್ಳಾರಿ, ಅ. 01: ಮಕ್ಕಳನ್ನು ಕೇವಲ ಆಸ್ತಿಗಾಗಿ ಹಿರಿಯರಂತೆ ಕಾಣದೆ, ವೃದ್ಧಾಪ್ಯದಲ್ಲಿ ಅವರಿಗೆ ಪ್ರೀತಿ, ಗೌರವ ಹಾಗೂ ಸೂಕ್ತ ರಕ್ಷಣೆ ನೀಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್‌. ಹೊಸಮನಿ ಹೇಳಿದರು.  

ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಗುರುವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಹಿರಿಯ ನಾಗರಿಕರಿಗಾಗಿ ಕಾರ್ಯನಿರ್ವಹಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ‘ವಿಶ್ವ ಹಿರಿಯ ನಾಗರಿಕರ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.  


ಸುದ್ದಿ ಓದಿ